ಹಾಸನ

ಸತತ ಪರಿಶ್ರಮದಿಂದ ಗುರಿ ಸಾಧನೆ: ಪ್ರಜ್ವಲ್

Published On :

ಕ.ಪ್ರ.ವಾರ್ತೆ   ಹಾಸನ   ಆ.8
ಸತತ ಪರಿಶ್ರಮದ ಮೂಲಕ ಮುನ್ನಡೆದರೆ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ಹೇಳಿದರು.
ನಗರದ ಕಲಾಭವನದಲ್ಲಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಂಘದಿಂದ ಗುರುವಾರ ನಡೆದ ಪಾಲಿಟೆಕ್ನಿಕ್ ಫೆಸ್ಟ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಸಂಘಟನೆ ಈ ದೇಶದ ಅತಿ ದೊಡ್ಡ ಶಕ್ತಿಯಾಗಿದ್ದು, ಸಂಘಟನೆಗಳು ಬಲಿಷ್ಠವಾಗಿದ್ದರೆ ವಿದ್ಯಾರ್ಥಿಗಳು ಸರ್ಕಾರದ ಸವಲತ್ತು ಸಮರ್ಪಕವಾಗಿ ಪಡೆಯಬಹುದು ಎಂದರು.
ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಮೂಲಸೌಕರ್ಯ ಇಲ್ಲದೆ ವಿದ್ಯಾರ್ಥಿಗಳು ಪರಿಶ್ರಮದ ನಡುವೆ ಅಭ್ಯಾಸ ಮಾಡಬೇಕಾಗಿದೆ. ಸಮಸ್ಯೆಗಳನ್ನು ಗಮನಕ್ಕೆ ತಂದರೆ ಎಲ್ಲರ ಜತೆಗೂಡಿ  ವಿದ್ಯಾರ್ಥಿಗಳ ಪರವಾಗಿ ನಿರಂತರ ಹೋರಾಟ ಮಾಡಲು ಸಿದ್ಧ ಎಂದು ಹೇಳಿದರು. ಜೆಡಿಎಸ್ ಮುಖಂಡ ದೇವೇಂದ್ರ, ನಗರಸಭೆ ಸದಸ್ಯ ಎಚ್.ಎಂ.ಸುರೇಶ್ಕುಮಾರ್, ಜೆಡಿಎಸ್ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಹೊಂಗೆರೆ ರಘು, ವಿದ್ಯಾರ್ಥಿ ಮುಖಂಡರಾದ ಜಯಂತ್, ಪ್ರೀತಂ, ಮೇಘದೂತ, ಭರತ್, ಪವನ್, ಯಶ್ವಂತ್, ಶಶಿಕೀರ್ತಿ ಇತರರು ಇದ್ದರು.
ಇದಕ್ಕೂ ಮೊದಲು ಪ್ರಜ್ವಲ್ ರೇವಣ್ಣ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಅಂಧ ಮಕ್ಕಳಿಗೆ ಸ್ವೆಟರ್ಗಳನ್ನು ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.