ಹಾಸನ

ಉಪನ್ಯಾಸಕರ ಅಮಾನತು ಖಂಡಿಸಿ ಪ್ರತಿಭಟನೆ

Published On :

ಹಾಸನ: ವಿನಾ ಕಾರಣ ಉಪನ್ಯಾಸಕರನ್ನು ಅಮಾನತು  ಮಾಡಿರುವುದನ್ನು ಖಂಡಿಸಿ ಸೋಮವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾಕಾರರು ಎನ್.ಆರ್.ವೃತ್ತ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ಮುಖಂಡರು ಮಾತನಾಡಿ, ಚನ್ನರಾಯಪಟ್ಟಣದ ನವೋದಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಡಿ.ಆರ್. ಗೋಪಾಲಕೃಷ್ಣ ಅವರನ್ನು ಕಾರಣವಿಲ್ಲದೆ, ಅಮಾನತುಗೊಳಿಸಿರುವ ಆಡಳಿತ ಮಂಡಳಿಯನ್ನು ಈ ಕೂಡಲೇ ಬದಲಾಯಿಸುವಂತೆ ಒತ್ತಾಯಿಸಿದರು.
ಜಿಲ್ಲಾಡಳಿತಕ್ಕೆ ಮನವಿ: ಅಮಾನತುಗೊಳಿಸಿರುವ ಉಪನ್ಯಾಸಕರನ್ನು ಮರು ನೇಮಕಾತಿ ಮಾಡಿಕೊಳ್ಳಬೇಕೆಂದು ಮತ್ತು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ  ಎಸಗುತ್ತಿರುವ ಆಡಳಿತ ಮಂಡಳಿ ಬದಲಾಯಿಸಬೇಕೆಂದು ಆಗ್ರಹಿಸಿ ಇದೆ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಎಬಿವಿಪಿಯ ಎಸ್. ಗೌತಮ್, ಅಮಿತ್, ಯೋಗಾ ನರಸಿಂಹ, ಗಂಗಾಧರ್, ಕೇಶವ ಸೇರಿದಂತೆ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.