ಕೆನರಾ ಬ್ಯಾಂಕ್ ವಹಿವಾಟು 7 ಲಕ್ಷ ಕೋಟಿ: ರಾಮಚಂದ್ರ
ಹಾಸನ: ಕೆನರಾಬ್ಯಾಂಕ್ ದೇಶದಲ್ಲೇ ಪ್ರಮುಖ ಬ್ಯಾಂಕ್ ಆಗಿದ್ದು, ರು. 7 ಲಕ್ಷ ಕೋಟಿ ಗೂ ಮಿಗಿಲಾದ ವ್ಯವಹಾರ ಹೊಂದಿದೆ ಎಂದು ಬ್ಯಾಂಕಿನ ಉಪ ಮಹಾಪ್ರಬಂಧಕ ಡಾ.ಎಸ್.ಟಿ.ರಾಮಚಂದ್ರ ತಿಳಿಸಿದರು.
ಕೆನರಾ ಬ್ಯಾಂಕ್ ಹಾಸನ ಮುಖ್ಯ ಶಾಖೆ ವತಿಯಿಂದ ಲೀಡ್ಬ್ಯಾಂಕ್ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳ ಗ್ರಾಹಕರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆದ್ಯತಾ ಕೇಂದ್ರಕ್ಕೆ ಹೆಚ್ಚಿನ ಕೊಡುಗೆ ಕೊಟ್ಟಿದೆ. ಅತಿ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳಿಗೆ ಹೆಚ್ಚಿನ ಸಾಲ ಸೌಲಭ್ಯದ ಮೂಲಕ ಸಹಕರಿಸುತ್ತಿದ್ದು, ಗ್ರಾಹಕರು ಇದರ ಹೆಚ್ಚಿನ ಉಪಯೋಗ ಪಡೆಯಬೇಕೆಂದರು.
ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ಕೆನರಾ ಬ್ಯಾಂಕಿನ ಗ್ರಾಹಕರ ಸೇವೆ ಉತ್ತಮವಾಗಿದೆ.
ಮಾತ್ರವಲ್ಲ, ಇತ್ತೀಚೆಗೆ ಕೆನರಾಬ್ಯಾಂಕ್ ಎಸ್ಎಂಇ ವಿಶೇಷ ಶಾಖೆಯನ್ನು ನಗರದ ಕೈಗಾರಿಕಾ ವಲಯದಲ್ಲಿ ಪ್ರಾರಂಭಿಸಿದ್ದಾರೆ. ಇದು ಹಾಸನ ಜಿಲ್ಲೆಯ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳಿಗೆ ವರದಾನವಾಗಿದೆ. ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಹಾಸನ ಶಾಖೆಯ ಮುಖ್ಯ ಪ್ರಬಂಧಕ ಕೆ.ಮಂಜುನಾಥ್ ಸ್ವಾಗತಿಸಿದರು. ವಿಭಾಗೀಯ ಪ್ರಬಂಧಕ ಎಚ್.ಡಿ.ಮಂಜುನಾಥ್ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಕ್ಕೆ ಬ್ಯಾಂಕಿನಿಂದ ದೊರಕುವ ಎಲ್ಲ ಸೇವೆಗಳ ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

