ಶಿಕ್ಷಣದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ
ಬೇಲೂರು: ಇಂದಿನ ಮಕ್ಕಳಲ್ಲಿ ಗುಣಾತ್ಮಾಕ ಶಿಕ್ಷಣ ರೂಪಿಸುವಲ್ಲಿ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣದ ಜತೆಯಲ್ಲಿ ಮಕ್ಕಳ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಈ ಅವಕಾಶವನ್ನು ಸದುಪಯೋಗಿಸಿಕೊಳ್ಳಬೇಕು ಎಂದು ಶಾಸಕ ವೈ.ಎನ್.ರುದ್ರೇಶ್ಗೌಡ ಕಿವಿಮಾತು ಹೇಳಿದ್ದಾರೆ.
ತಾಲೂಕಿನ ಹೆಬ್ಬಾಳು ಗ್ರಾಮದ ಸರ್ಕಾರಿ ಫ್ರೌಢಶಾಲೆಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನಡೆಸಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಬಿಸಿಯೂಟ, ಕ್ಷೀರಭಾಗ್ಯ ಯೋಜನೆ, ಸಮವಸ್ತ್ರ ಹತ್ತು ಹಲವು ಸೌಲಭ್ಯ ನೀಡುವ ದಿಸೆಯಲ್ಲಿ ಹೆಚ್ಚಿನ ಅನುದಾನ ಮೀಸಲಿಟ್ಟಿದ್ದು, ಶಿಕ್ಷಕರು ಮತ್ತು ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ನೀಡಿ ಮುಂದಿನ ಸತ್ಪ್ರಜೆಗಳ ಮಾಡುವ ಹೊಣೆಗಾರಿಕೆ ಇದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆ ಯಾವುದರಲ್ಲೂ ಕಮ್ಮಿ ಇಲ್ಲ: ಶೈಕ್ಷಣಿಕ ಕ್ಷೇತ್ರದಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಹಿಂದೆ ಹಾಕುವ ದಿನ ಹತ್ತಿರವಿದೆ. ಮಕ್ಕಳ ಕೇವಲ ಶಿಕ್ಷಣದಲ್ಲಿ ಅಂಕಕ್ಕೆ ಮಾತ್ರ ಸೀಮಿತವಾಗದೆ ಪಠ್ಯೇತರ ಚಟುವಟಿಕೆಯಲ್ಲಿ ತೋಡಗಿಸಿಕೊಳ್ಳಬೇಕು ಆಗ ಮಾತ್ರ ವಿದ್ಯಾರ್ಥಿ ಪ್ರತಿಯೊಂದು ಕ್ಷೇತ್ರದಲ್ಲಿ ಜಯ ಸಾದಿಸಬಹುದು. ಇಂದು ಉದ್ಯೋಗದಲ್ಲಿ ವಿಫುಲ ಅವಕಾಶಗಳು ಇದ್ದು, ವಿದ್ಯಾರ್ಥಿಗಳ ಗುರಿ ಉತ್ತಮವಾಗಿರಲಿ ಎಂದ ಅವರು ಹೆಬ್ಬಾಳು ಸರ್ಕಾರಿ ಪ್ರೌಢಶಾಲೆಗೆ ಶೀಘ್ರದಲ್ಲಿ ಉತ್ತಮ ರಸ್ತೆ ಮಾಡಿಸುವ ಭರವಸೆ ನೀಡಿದರು.
ಮೂಲ ಸವಲತ್ತು ಒದಗಿಸಿ: ತಾಲೂಕು ಪಂಚಾಯ್ತಿ ಸದಸ್ಯ ಪರ್ವತಯ್ಯ ಮಾತನಾಡಿ, ಹೆಬ್ಬಾಳು ತಾಲೂಕು ಪಂಚಾಯ್ತಿ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರು ಕಲುಷಿತದಿಂದ ಕೂಡಿದ್ದು, ಶಾಸಕರು ಜಾವಗಲ್ ಹೋಬಳಿಗೆ ಯಗಚಿಯಿಂದ ಹರಿಸುವ ನೀರನ್ನು ಈ ಗ್ರಾಮಗಳಿಗೆ ನೀಡುವ ಮೂಲಕ ರೋಗಗಳನ್ನು ತಡೆಯಬೇಕು ಎಂದರು.
ಮಲ್ಲನಹಳ್ಳಿಯಿಂದ ಹನಿಕೆ ಸಂತೆ ಗ್ರಾಮದ ತನಕ ರಸ್ತೆ ಹದಗೆಟ್ಟಿದ್ದು, ಕೂಡಲೇ ಕೆಲಸಕ್ಕೆ ಮಂಜೂರು ಮಾಡಿಸಬೇಕು ಮತ್ತು ಹೆಬ್ಬಾಳು ತಾಲೂಕು ಪಂಚಾಯಿತಿ ಕ್ಷೇತ್ರದ ಗ್ರಾಮಗಳಿಗೆ ಸುವರ್ಣ ಗ್ರಾಮ ಹಾಗೂ ಹೆಚ್ಚುವರಿ ಶೌಚಾಲಯಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಬಿ.ಸುಂದ್ರೇಶ್ ಮಾತನಾಡಿ, ಖಾಸಗಿ ಶಾಲೆ ಮತ್ತು ಸರ್ಕಾರಿ ಶಾಲೆಗಳ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ ಎಂದರು.
ಶಾಲೆಯಲ್ಲಿ ಮಕ್ಕಳಿಗೆ 1ರಿಂದ 10ನೇ ತರಗತಿವರೆಗೆ ಎಲ್ಲ ಮಕ್ಕಳಿಗೂ ವಾರದಲ್ಲಿ ಮೂರು ದಿನ ವಿಟಮಿನ್ ಮಾತ್ರೆಗಳ ಹಾಗೂ ಹಾಲು ವಿತರಣೆ ಮಾಡುತ್ತಿದೆ. ಮಕ್ಕಳ ಈ ಸೌಲಭ್ಯಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕಿನ ನಾಲ್ಕೂ ಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ವಿಶ್ರಾಂತಿ ಗೃಹ ನಿರ್ಮಾಣ ಮಾಡಲು 1.50 ಕೋಟಿ ಮಂಜೂರು ಮಾಡಲಾಗಿದೆ. ಈ ಅನುದಾನ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಸಂಸ್ಥೆ ಬಿಡುಗಡೆ ಮಾಡಿದೆ.
ಹೆಬ್ಬಾಳು ಸರ್ಕಾರಿ ಪ್ರೌಢಶಾಲೆಯ ಹೆಚ್ಚುವರಿ ಕಟ್ಟಡಕ್ಕೆ ಸುಮಾರು 28 ಲಕ್ಷ ವೆಚ್ಚವಾಗಲಿದೆ. ಶೌಚಾಲಯ ಹಾಗೂ ಕುಡಿಯುವ ನೀರಿನ ಸೌಲಭ್ಯ ಹೊಂದಿದೆ, ಈ ಕಟ್ಟಡದ ಕಾಮಾಗಾರಿಯನ್ನು ನಾಗಾರ್ಜುನ ಕಂಪನಿ ಮುಂದಿನ ಮಾರ್ಚ್ ಒಳಗೆ ನಿರ್ಮಾಣ ಮಾಡಲಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ವಿಘ್ನೇಶಯ್ಯ, ಶಿವಕುಮಾರ್, ಲಕ್ಷ್ಮಣ್, ಗೋಪಾಲ್, ಎಚ್.ಜಿ.ಭುವನೇಶ್. ಎಚ್.ಜೆ, ಮಲ್ಲೇಗೌಡ, ರುದ್ರೇಶ್, ಶಿಕ್ಷಕ ಚಂದ್ರೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಸಕ ವೈ.ಎನ್. ರುದ್ರೇಶ್ಗೌಡ ಹೈಟೆಕ್ ಅಡುಗೆಮನೆ ಕಾಮಗಾರಿಗೂ ಗುದ್ದಲಿಪೂಜೆ ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

