ಜಲಾಶಯಗಳ ನೀರಿನ ಮಟ್ಟ
ಹಾಸನ: ಹೇಮಾವತಿ ಜಲಾನಯನ ಪ್ರದೇಶದಲ್ಲಿ ಮಳೆ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ಜಲಾಶಯಕ್ಕೆ 5,750 ಕ್ಯುಸೆಕ್ ನೀರು ಹರಿದು ಬಂದಿದೆ. ಗರಿಷ್ಠ ನೀರಿನ ಮಟ್ಟ 2922 ಅಡಿ, ಇಂದಿನ ನೀರಿನ ಮಟ್ಟ 2921.75, ಜಲಾಶಯದಿಂದ ನದಿಗೆ 2400 ಕ್ಯುಸೆಕ್, ನಾಲೆಗೆ 3700 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ.ಜಲಾಶಯದಲ್ಲಿ ಪ್ರಸ್ತುತ 36.861 ಟಿಎಂಸಿ ನೀರು ಸಂಗ್ರಹವಾಗಿದೆ.
ಯಗಚಿ ಜಲಾಶಯ: ಇಂದಿನ ನೀರಿನ ಮಟ್ಟ 3164.726 ಅಡಿ. ಒಳ ಹರಿವು 700 ಕ್ಯುಸೆಕ್, ಹೊರ ಹರಿವು ನಾಲೆಗೆ 150, ನದಿಗೆ 300 ಕ್ಯುಸೆಕ್, ಒಟ್ಟು ನೀರಿನ ಸಂಗ್ರಹ ಮಟ್ಟ 3.600 ಟಿಎಂಸಿ ನೀರು ಸಂಗ್ರಹವಾಗಿದೆ.
ವಾಟೆ ಹೊಳೆ: ಇಂದಿನ 3165.19 ಅಡಿ, ಒಳ ಹರಿವು 40 ಕ್ಯುಸೆಕ್, ಒಟ್ಟು 1.277 ಟಿಎಂಸಿ ನೀರು ಸಂಗ್ರಹವಾಗಿದೆ.
ತಾಲೂಕುವಾರು ಮಳೆ ವಿವರ: ಬೇಲೂರು 0.6, ಸಕಲೇಶಪುರ 1.6, ಮಿ.ಮೀಟರ್ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಬೇಲೂರು ಕಸಬ 0.6, ಸಕಲೇಶಪುರ ಕಸಬ 1.6, ಶುಕ್ರವಾರ ಸಂತೆ 1,ಮಾರನಹಳ್ಳಿ 17,ಹೊಸೂರು 3, ಹಾನಬಾಳು 2.6, ಮಿ.ಮೀಟರ್ ಮಳೆಯಾಗಿದೆ.
'ಸಾಹಿತ್ಯ ಬದುಕಿನ ಅವಿಭಾಜ್ಯ ಅಂಗ'
ಹಾಸನ: ಸಾಹಿತ್ಯ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಮನುಷ್ಯನ ಬದುಕಿನ ಪ್ರತಿಯೊಂದು ನಡವಳಿಕೆಗೂ ಅವು ಅತ್ಯವಶ್ಯಕ ಎಂದು ಉಪನ್ಯಾಸಕ ಮೋಹನ್ ಮಟ್ಟನವಿಲೆ ತಿಳಿಸಿದ್ದಾರೆ. ಗಂಡಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಜನಪದ ಸಾಹಿತ್ಯ ಮತ್ತು ಜನಪದ ಗೀತಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ರಾಮೀಣರು, ಇಂದು ಟಿವಿ ಧಾರಾವಾಹಿ, ಮೊಬೈಲ್ಗೆ ಮಾರು ಹೋಗಿ ಗ್ರಾಮೀಣ ಜನಪದ ಪರಿಕರಗಳನ್ನು ಮರೆಯುತ್ತಿದ್ದಾರೆ ಎಂದು ವಿಷಾದ ವ್ಯಕ್ತ ಪಡಿಸಿದರು. ಪ್ರಾಂಶುಪಾಲ ಪ್ರೊ.ಎಂ.ಕೆ. ಉಮಾನಾಥ್ ಅಧ್ಯಕ್ಷತೆ ವಹಿಸಿದ್ದರು. ಡಾ.ಶರತ್ಕುಮಾರ್ ಸ್ವಾಗತಿಸಿದರು. ರಂಗೇಗೌಡ, ಶಿವರಾಜು ವಂದಿಸಿದರು. ಲಿಂಗರಾಜು, ಉಪಸ್ಥಿತರಿದ್ದರು. ಬಸವರಾಜು, ನವೀನ್, ಮೋಹನ್, ಪವನ್ ಇತರರು ಇದ್ದರು.
ಜೂಜಾಟ: ಒಬ್ಬ ಬಂಧನ
ಹಾಸನ: ಮಟ್ಕಾ ಜೂಜಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ನಗರದಲ್ಲಿ ಸೋಮವಾರ ನಡೆದಿದೆ.
ನಗರದ ಆರ್.ಸಿ. ರಸ್ತೆಯ ಬಾಲಕರ ಸರ್ಕಾರಿ ಹೈಸ್ಕೂಲ್ ಕಾಂಪೊಂಡ್ ಒಳಗಡೆ ಮಟ್ಕಾ ಜೂಜಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಪೆನ್ಷ್ನ್ ಮೊಹಲ್ಲಾದ ರವಿ (27) ಎಂಬಾತನನ್ನು ಬಂಧಿಸಿದ್ದಾರೆ. ಜೂಜಾಟದಿಂದ ಗಳಿಸಿದ್ದ 150 ರು. ನಗದು ವಶಪಡಿಸಿ ಕೊಂಡಿದ್ದಾರೆ. ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

