ಹಾಸನ

ಇಂಟರ್ನೆಟ್ ಬಳಕೆ ಬಗ್ಗೆ ಗುಣಾತ್ಮಕ ಶಿಕ್ಷಣ: ರೆಹಮತ್

Published On :

ಬೇಲೂರು: ಮಕ್ಕಳಿಗೆ ಕಂಪ್ಯೂಟರ್ ಹಾಗೂ ಇಂಟರ್ನೆಟ್ಉಪಯೋಗದ ಬಗ್ಗೆ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶವಿದ್ದು, ಆ ಕನಸು ಇಂದು ನನಸಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ರೆಹಮತ್ ಹೇಳಿದರು. ತಾಲೂಕಿನ ಪ್ರಸಾದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮಸ್ಥರು ಹಾಗೂ ಎಸ್ಡಿಎಂಸಿ ಸಮಿತಿಯವರು 30 ಸಾವಿರ ರು. ಮೌಲ್ಯದ ಕಂಪ್ಯೂಟರ್ಅನ್ನು ಕೊಡುಗೆಯಾಗಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಡುಗೆಯಾಗಿ ನೀಡಿರುವ ಕಂಪ್ಯೂಟರ್ಅನ್ನು ಎಸ್ಎಲ್ಡಿಡಿ  ಗ್ರಂಥಾಲಯದಲ್ಲಿ ಅಳವಡಿಸಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಂಪ್ಯೂಟರ್ನ ಮಹತ್ವ ಮತ್ತು ಇಂಟರ್ನೆಟ್ ಬಳಕೆ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುವುದು ಎಂದರು. ಎಸ್ಡಿಎಂಸಿಯ ಪರಮೇಶ್, ನಾರಾಯಣ್, ಕುಮಾರ್, ಕವಿತ, ಶಾಂತ ಇದ್ದರು. ಸಹ ಶಿಕ್ಷಕ ಮಂಜುನಾಥ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.