ಹಾಸನ

ಕಸಮುಕ್ತ ಪಟ್ಟಣವಾಗಿಸಲು ಜನತೆ ಸಹಕಾರ ಅಗತ್ಯ: ಕುಮಾರಸ್ವಾಮಿ ಮನವಿ

Published On :

ಕ.ಪ್ರ.ವಾರ್ತೆ    ಸಕಲೇಶಪುರ    ಆ. 13
ಕಸಮುಕ್ತ ಪಟ್ಟಣವನ್ನಾಗಿಸಲು ಪುರಸಭೆಯೊಂದಿಗೆ ಸಾರ್ವಜನಿಕರು ಕೈಜೋಡಿಸ ಬೇಕು ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಕುಡಗರಹಳ್ಳಿ ಬಡಾವಣೆಯಲ್ಲಿ ಪುರಸಭೆ ಆಯೋಜಿಸಿದ್ದ ಮನೆ-ಮನೆಗೆ ಕಸದ ಬುಟ್ಟಿ ಹಂಚಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಪಟ್ಟಣವನ್ನಾಗಿ ಮಾಡಲು ಜಿಲ್ಲೆಯಲ್ಲೆ ಪುರಸಭೆ ಪ್ರಥಮವಾಗಿ ಈ ಪ್ರಯತ್ನಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ಲಾಸ್ಟಿಕ್ ಕವರ್ಗಳನ್ನು ನಿಷೇಧಿಸಿದೆ. ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ತಗ್ಗಿದೆಯಾದರೂ ಕೆಲ ವರ್ತಕರು ಹಾಗೂ ಗ್ರಾಹಕರು ಇನ್ನೂ ಪ್ಲಾಸ್ಟಿಕ್ ಕವರ್ ಬಳಕೆ ಮಾಡುತ್ತಿರುವುದು ಬೇಸರದ ಸಂಗತಿ ಎಂದರು.
ಪಟ್ಟಣದ ಕಸವಿಲೇವಾರಿ ಮಾಡಲು ಪುರಸಭೆ ಸತತ ಪ್ರಯತ್ನ ನಡೆಸುತ್ತಿದ್ದು, ಕಸವಿಲೇವಾರಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದ್ದರಿಂದ ಕರಗ ಬಲ್ಲಂತಹ ಹಸಿ ಕಸ ಹಾಗೂ ಪ್ಲಾಸ್ಟಿಕ್ ಕಸವನ್ನು ಬೇರೆ ಮಾಡುವ ನಿಟ್ಟಿನಲ್ಲಿ ಪುರಸಭೆ ಮುಂದಾಗಿದೆ. ಮನೆಗಳಿಂದಲೇ ಕಸ ಬೇರ್ಪಡಿಸುವ ನಿಟ್ಟಿನಲ್ಲಿ ಪುರಸಭೆ ಪಟ್ಟಣದ ಪ್ರತಿ ಮನೆಗಳಿಗೂ ಬುಟ್ಟಿಗಳನ್ನು ವಿತರಿಸಲಾಗುತ್ತಿದ್ದು, ಪುರಸಭೆಯ ಈ ಪ್ರಯತ್ನಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು. ಪುರಸಭೆ ಸದಸ್ಯರಾದ ಉಮೇಶಾಚಾರಿ, ಪುಷ್ಪಾವತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.