ಜಿಲ್ಲಾ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾಸನ: ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ನವೆಂಬರ್ನಲ್ಲಿ ಅಂತಾರಾಷ್ಟ್ರೀಯ ಕೃಷಿ ಮೇಳ ಆಯೋಜಿಸಿದ್ದು, ಇದರ ಅಂಗವಾಗಿ ಕೃಷಿ ಪ್ರಶಸ್ತಿ ನೀಡಲು ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ, ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ ಕಾರ್ಪೋರೇಶನ್ ಬ್ಯಾಂಕ್ ಪ್ರಾಯೋಜಿತ ಕಾರ್ಪ್ ರೈತ ಪ್ರಶಸ್ತಿ ಡಾ.ಎಂ. ಎಚ್. ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ ನೀಡಲಾಗುವುದು.ಈ ಸಂಬಂಧದ ಅರ್ಜಿ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಪಶು ಸಂಗೋಪನಾ ಇಲಾಖೆ ಲ್ಲಿ ದೊರೆಯುತ್ತದೆ. ಆಸಕ್ತ ರೈತ ಬಾಂಧವರು ಸೆ.20ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ಕಂದಲಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಸಲ್ಲಿಸುವಂತೆ ಕಂದಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂ- 08172 256092 ಸಂಪರ್ಕಿಸ ಬಹುದು.
ಸ್ವಾತಂತ್ರ್ಯೋತ್ಸವಕ್ಕೆ ಭರದ ಸಿದ್ಧತೆ
ಹೊಳೆನರಸೀಪುರ: ತಾಲೂಕು ಆಡಳಿತ 67 ನೇ ಸ್ವಾತಂತ್ರೋತ್ಸವವನ್ನು ಅತ್ಯಂತ ಅರ್ಥಗರ್ಭಿತವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆ. 15 ಗುರುವಾರ ಬೆಳಿಗ್ಗೆ ಎಂಟೂವರೆಗೆ ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ ಶಾಸಕ ಎಚ್.ಡಿ.ರೇವಣ್ಣ ಅಧ್ಯಕ್ಷತೆಯಲ್ಲಿ ತಹಸೀಲ್ದಾರ್ ಮಂಜುಳ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಅರಕಲಗೂಡು ಶಾಸಕ ಎ.ಮಂಜು ಹಾಗೂ ಜನಪ್ರತಿನಿಧಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು, ನಾನಾ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ಧಾರೆ. ಮಾನಸ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ.ಟಿ.ಲೋಕೇಶ್ ಪ್ರಧಾನ ಭಾಷಣ ಮಾಡಲಿದ್ದಾರೆ. ಬೆಳಗ್ಗಿನ ಕಾರ್ಯಕ್ರಮದ ನಂತರ ಪುರಸಭೆ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ.
ಎರಡು ದಿನಪುಸ್ತಕೋತ್ಸವ
ಹಾಸನ: ನಗರದಲ್ಲಿ ಹಾಡ್ಲಹಳ್ಳಿ ಪಬ್ಲಿಕೇಷನ್ಸ್ ವತಿಯಿಂದ ಆ.14 ಮತ್ತು 15 ರಂದು ಪುಸ್ತಕೋತ್ಸವ ಹಮ್ಮಿಕೊಳ್ಳಲಾಗಿದೆ. 14 ರಂದು ಬೆಳಗ್ಗೆ 9-30ಕ್ಕೆ ಡಾ.ಅಶೋಕ್ಗೌಡ ಕಾರ್ಯಕ್ರಮ ಉದ್ಘಾಟಿಸುವರು. ಪುಸ್ತಕೋತ್ಸವದಲ್ಲಿ ಕಥೆ, ಕಾದಂಬರಿ, ಆತ್ಮಚರಿತ್ರೆ, ವ್ಯಕ್ತಿತ್ವ ವಿಕಸನ, ಮಕ್ಕಳ ಸಾಹಿತ್ಯ, ಆಧ್ಯಾತ್ಮ ಹೀಗೆ ನಾನಾ ಪ್ರಕಾರದ ಪುಸ್ತಕಗಳು ದೊರೆಯಲಿವೆ. 14ರ ಸಂಜೆ 5 ಕ್ಕೆ ಶೈಲಜಾ ಹಾಸನ್ ಅವರ ಇಳಾ ಕಾದಂಬರಿಯ ಕುರಿತು ಸಂವಾದ ನಡೆಯುವುದು. 15 ರ ಸಂಜೆ ಪುಟ ಹಾಗೂ ಪುಸ್ತಕ ವಿನ್ಯಾಸದ ಬಗ್ಗೆ ಖ್ಯಾತ ಚಿತ್ರಕಲಾವಿದ ಬಿ.ಎಸ್. ದೇಸಾಯಿ ಮಾತನಾಡುವರು. ಪುಸ್ತಕಪ್ರೇಮಿಗಳು ಈ ಸದಾವಕಾಶ ಪಡೆಯುವಂತೆ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

