ಪರವಾನಗಿ ಇಲ್ಲದೆ ವಾಹನ ಚಾಲನೆ: ಕಠಿಣ ಕ್ರಮ
ಕ.ಪ್ರ.ವಾರ್ತೆ ಹೊಳೆನರಸೀಪುರ ಆ. 13
ಪಟ್ಟಣದಲ್ಲಿ ದ್ವಿಚಕ್ರ ವಾಹನ ಸವಾರರು ಚಾಲನಾ ಪರವಾನಗಿ ಇಲ್ಲದೆ ಚಾಲನೆ ನಡೆಸುತ್ತಿದ್ದು ಅಂಥವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತಿದೆ ಎಂದು ನಗರಠಾಣಾ ಪಿಎಸ್ಐ ಶಿವಕುಮಾರ್ ತಿಳಿಸಿದ್ದಾರೆ.
ಅವರು ಪಟ್ಟಣದಲ್ಲಿ ದ್ವಿಚಕ್ರವಾಹನ ಸವಾರರನ್ನು ತಡೆದು ದಾಖಲೆ ಪರಿಶೀಲನೆ ನಂತರ ಮತು ವಾಹನದ ವಿಮೆ ಮತ್ತು ದಾಖಲೆ ಪತ್ರಗಳನ್ನು ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಪಟ್ಟಣದಲ್ಲಿ ದ್ವಿಚಕ್ರ ಸವಾರರು ತ್ರಿಬಲ್ರೈಡ್ ಸೇರಿದಂತೆ ಮನ ಬಂದಂತೆ ಚಾಲನೆ ಮಾಡುತ್ತಿದ್ದಾರೆ. ಇಂತಹವರಿಗೆ ಕಾನೂನು ನೀತಿ ನಿಯಮಾವಳಿಗೆಗಳನ್ನು ಅರಿವು ಮೂಡಿಸುವುದು ತಮ್ಮ ಕೆಲಸವಾಗಿದೆ ಎಂದರು.
ಜತೆಗೆ ಇತ್ತೀಚಿನ ದಿನಗಳಲ್ಲಿ ಯುವಕರು ಬೈಕ್ ಸವಾರಿ ಮಾಡುವಾಗ ಯುವತಿಯರನ್ನು ಚುಡಾಯಿಸುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ತಾವು ಕಠಿಣ ಕ್ರಮಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಪ್ರತಿಕ್ರಿಯಿಸಿದರು.
ಪಟ್ಟಣದ ಪೇಟೆ ಮುಖ್ಯ ರಸ್ತೆಯಲ್ಲಿ ದಿನದಿನಕ್ಕೂ ವಾಹನ ಸಂಚಾರ ದಟ್ಟವಾಗಿದ್ದು ಜತೆಗೆ ಜನತೆಯ ಓಡಾಟಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ.
ಇದನ್ನು ತಹಬದಿಗೆ ತರುವ ಸಲುವಾಗಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ವಾರದಲ್ಲಿ ಇಂತಿಷ್ಟು ದಿನಗಳು ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡುವುದರಿಂದ ಅಡಚಣೆಯನ್ನು ತಹಬದಿಗೆ ತರಲು ಸಾಧ್ಯವಾಗಲಿದೆ ಎಂದು ನುಡಿದರು.
ಮುಂದಿನ ಒಂದು ವಾರದೊಳಗೆ ಗಾಂಧಿ ವೃತ್ತದಲ್ಲಿ ಬೇಕಾಬಿಟ್ಟಿ ದ್ವಿಚಕ್ರ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡಚಣೆಗೆ ಕಾರಣರಾಗುವ ವಾಹನ ಚಾಲಕರ ಮೇಲೆ ಕಠಿಣ ಕ್ರಮಕೈಗೊಂಡು ಸುವ್ಯವಸ್ಥೆ ಕಲ್ಪಿಸಲು ಮುಂದಾಗುವುದಾಗಿ ತಿಳಿಸಿದರು. ಚಾಲನ ಪರವಾನಗಿ ಇಲ್ಲದವರ ಮೇಲೆ ಕ್ರಮಕೈಗೊಂಡಿದ್ದರಿಂದ ಸುಮಾರು 30 ಮಂದಿಯಿಂದ ಮೂರು ಸಾವಿರದಷ್ಟು ದಂಡವನ್ನು ವಸೂಲಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

