ಪಪೂ ಕಾಲೇಜು ಕೊಠಡಿ ನಿರ್ಮಾಣಕ್ಕೆ ಶಿಕ್ಷಣ ಸಚಿವ ಸಕಾರಾತ್ಮಕ ಒಪ್ಪಿಗೆ: ಶಾಸಕ ಬಾಲಕೃಷ್ಣ
ಚನ್ನರಾಯಪಟ್ಟಣ: ತಾಲೂಕಿನ 12 ಪದವಿ ಪೂರ್ವ ಕಾಲೇಜುಗಳಲ್ಲಿ 60 ಕೊಠಡಿಗಳ ಕೊರತೆಯಿದ್ದು, ಅವುಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಸ್ವತಂತ್ರ ಪದವಿ ಪೂರ್ವ ಕಾಲೇಜು ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಸಂಘ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣ ಸೇರಿದಂತೆ ತಾಲೂಕಿನ 12 ಪದವಿ ಪೂರ್ವ ಕಾಲೇಜುಗಳಲ್ಲಿ 60 ಕೊಠಡಿಗಳ ಕೊರತೆಯಿದ್ದು ಅವುಗಳನ್ನು ಪ್ರಸಕ್ತ ಸಾಲಿನಲ್ಲಿಯೇ ನಿರ್ಮಿಸಿಕೊಡುವಂತೆ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಈ ಸಂಬಂಧ ಸಕಾರಾತ್ಮಕ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಎರಡು ಪದವಿ ಪೂರ್ವ ಕಾಲೇಜಿನಲ್ಲಿಯೇ ಹೆಚ್ಚು ಕೊಠಡಿಗಳ ಕೊರತೆಯಿದ್ದು, ಕಾಲೇಜು ಕಟ್ಟಡದ ಮೇಲಂತಸ್ತಿನಲ್ಲಿ 7 ಕೊಠಡಿಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಪೋಷಕರು ತಮ್ಮ ಮಕ್ಕಳನ್ನೇ ಆಸ್ತಿಯೆಂದು ತಿಳಿದು ಅವರಿಗೆ ಉನ್ನತ ವಿದ್ಯೆ ನೀಡಲು ಮುಂದಾಗುತ್ತಿದ್ದು, ಇಂತಹ ಮಾರ್ಗ ಹಿಡಿದಿರುವ ಪೋಷಕರಿಗೆ ಎಂದಿಗೂ ಕಳಂಕ ತಾರದಂತೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹೆಚ್ಚು ಅಂಕಗಳನ್ನು ಗಳಿಸುವತ್ತಾ ಮುಂದಾಗಬೇಕು ಎಂದರು.
ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯದ ಮೇಲೆ ಚಿಂತನೆ ನಡೆಸುತ್ತಿದ್ದಾರೆಯೇ ಹೊರತು ತಾವು ಆಸ್ತಿ ಮತ್ತೊಂದು ಗಳಿಕೆಯ ಮೇಲಲ್ಲ ಎಂದು ತಿಳಿಸಿದರು.
ಉಪನ್ಯಾಸಕ ಎಚ್.ಎನ್. ಮಲ್ಲೇಶಗೌಡ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಮಚಂದ್ರ, ಪ್ರಾಂಶುಪಾಲ ಶಿವರಾಂ, ಉಪನ್ಯಾಸಕ ಶಿವಣ್ಣ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಶಾಸಕ ಬಾಲಕೃಷ್ಣ ಸನ್ಮಾನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

