ಪ್ರಾಮಾಣಿಕವಾಗಿ ಚುನಾವಣಾ ಕಾರ್ಯ ನಿರ್ವಹಿಸಲು ಸಲಹೆ
ಹಾಸನ: ಸಹಕಾರ ಸಂಘಗಳ ಚುನಾವಣಾ ಆಯೋಗದ ನಿಯಮಗಳಿಗೆ ಅನುಗುಣವಾಗಿ ಪ್ರಾಮಾಣಿವಾಗಿ ಚುನಾವಣೆ ಕಾರ್ಯನಿರ್ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಸಲಹೆ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಸಹಕಾರ ಸಂಘಗಳ ಕಾಯಿದೆಯಲ್ಲಿನ ತಿದ್ದುಪಡಿಗೆ ಅನುಗುಣವಾಗಿ ಚುನಾವಣೆ ನಡೆಸುವುದರಿಂದ ಪಾರದರ್ಶಕತೆ ಇರುತ್ತದೆ. ಇದರಿಂದ ಸಹಕಾರ ಸಂಘಗಳಲ್ಲಿನ ಲೋಪದೋಷ ಸರಿಪಡಿಸಿ ಕೊಂಡು ಮುಂದುಹೋಗಲು ಸಹಾಯಕವಾಗುತ್ತದೆ ಎಂದರು.
ಹಿಂದಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕುಗಳು ಪ್ರಸ್ತುತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗಳಾಗಿವೆ. ಇವುಗಳಿಗೆ ರಿಸರ್ವ್ ಬ್ಯಾಂಕ್ ಹಾಗೂ ನಬಾರ್ಡ್ ಸೂಚಿಸುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ತನ್ನ ಕಾರ್ಯಗಳನ್ನು ನಿರ್ವಹಿಸಬೇಕು. ಆದ್ದರಿಂದ ಎಲ್ಲಾ ಮಾಹಿತಿಯನ್ನು ಸಮಗ್ರವಾಗಿ ತಿಳಿದುಕೊಳ್ಳುವಂತೆ ಹೇಳಿದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕಾರ್ಲೆ ಇಂದ್ರೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರ ಸಂಘಗಳ ಚುನಾವಣೆಯಲ್ಲಿ ಮೀಸಲಾತಿಯನ್ನು ಕಡ್ಡಾಯ ಜಾರಿಗೊಳಿಸಬೇಕು. ಸಹಕಾರಿ ಕಾಯ್ದೆಯ ತಿದ್ದುಪಡಿಗೆ ಅನುಗುಣವಾಗಿ ಚುನಾವಣಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
ಜಿಲ್ಲಾ ಸಹಕಾರ ಸಂಘಗಳ ಚುನಾವಣಾಧಿಕಾರಿ ಇಲ್ಯಾಸ್ಉಲ್ಲಾ ಷರೀಫ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಡಿ.ಎಂ.ಪರಮೇಶ್ ಮಾತ ನಾಡಿದರು. ತಾಲೂಕು ಟಿಎಪಿಸಿಎಂಎಸ್ ನಿರ್ದೇಶಕ ಜಯರಾಂ, ಆರ್.ಟಿ. ದ್ಯಾವೇಗೌಡ ಇದ್ದರು. ಭಾರತಿ ಸ್ವಾಗತಿಸಿದರು. ಕೇಶವ ಪ್ರಸಾದ್ ವಂದಿಸಿದರು, ವಾಣಿ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

