ಹಾಸನ

ವಾಹನಕ್ಕೆ ಸಿಲುಕಿ ಹೆಣ್ಣು ಚಿರತೆ ಸಾವು

Published On :

ಚನ್ನರಾಯಪಟ್ಟಣ: ವೇಗವಾಗಿ ಚಲಿಸುತ್ತಿದ್ದ ವಾಹನಕ್ಕೆ ಚಿರತೆಯೊಂದು ಸಿಕ್ಕಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಕತ್ತರಿಘಟ್ಟ ಗೇಟ್ ಬಳಿ ಸಂಭವಿಸಿದೆ. ಒಂದೂವರೆ ವರ್ಷದ ಹೆಣ್ಣು ಚಿರತೆ ಆಹಾರಕ್ಕಾಗಿ ಸುತ್ತಾಡಿ ತನ್ನ ಗೂಡಿಗೆ ವಾಪಸಾಗುತ್ತಿದ್ದ ವೇಳೆ ವಾಹನಕ್ಕೆ ಸಿಕ್ಕು ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ರಸ್ತೆಯಲ್ಲಿಯೇ ಸಾವಿಗೀಡಾಗಿದೆ. ಮುಂಜಾನೆ 6 ಗಂಟೆ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ನೋವಿನಿಂದ ಚಿರತೆ ಬಳಲುತ್ತಿದ್ದ ಸಂದರ್ಭದಲ್ಲಿ ಅಕ್ಕ ಪಕ್ಕದ ಜಮೀನಿನ ರೈತರು ಚಿರತೆಯನ್ನು ನೋಡಿ ಉಪಚಾರ ಮಾಡಿದ್ದಾರೆ. ತಲೆಗೆ ಪೆಟ್ಟು ಬಿದ್ದಿದ್ದರಿಂದ ಚೇತರಿಸಿಕೊಳ್ಳಲಾಗದೆ ಮೃತಪಟ್ಟಿದೆ. ಕಳೆದ ಎರಡು ತಿಂಗಳು ಹಿಂದಷ್ಟೇ ಕತ್ತರಿಘಟ್ಟ ಗೇಟ್ ಬಳಿಯೇ ಮೂರು ವರ್ಷದ ಚಿರತೆ ರಾತ್ರಿ ವಾಹನವೊಂದಕ್ಕೆ ಸಿಕ್ಕಿ ಮೃತಪಟ್ಟಿತ್ತು. ಬುಧವಾರ ಮತ್ತೊಂದು ಚಿರತೆ ಮೃತಪಟ್ಟಿದೆ. ಪಟ್ಟಣದ ಪಶು ಆಸ್ಪತ್ರೆಯಲ್ಲಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಬೆಲಸಿಂದ ಶ್ರೀವನದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.