ಹಾಸನ

ಕೆಟಿಪಿ ನಿಧನಕ್ಕೆ ಸಂತಾಪ

Published On :

ಹಾಸನ: ನಗರಸಭೆ ಮಾಜಿ ಅಧ್ಯಕ್ಷ ಮತ್ತು ಮಲೆನಾಡು ತಾಂತ್ರಿಕ ಸಮಿತಿ ಮಾಜಿ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿದ್ದ ಕೆ.ಟಿ.ಪ್ರಕಾಶ್ ದಾಸಪ್ಪ ನಿಧನಕ್ಕೆ ಎವಿಕೆ ಮಹಿಳಾ ಕಾಲೇಜಿನ ಆಡಳಿತ ಮಂಡಳಿ ಸಂತಾಪ ಸೂಚಿಸಿದೆ. ರಾಜಕೀಯ ಮತ್ತು ಸಮಾಜಸೇವಾ ಕ್ಷೇತ್ರಗಳಲ್ಲಿ ನಿಸ್ಪೃಹ ಸೇವೆ ಸಲ್ಲಿಸಿ ತಮ್ಮ ಜನಪರ ವ್ಯಕ್ತಿತ್ವದಿಂದ ಜನಾನುರಾಗಿಗಳಾಗಿದ್ದರು. ಪ್ರಕಾಶ್ ದಾಸಪ್ಪ ನಿಧನದಿಂದ ಉಂಟಾದ ದು:ಖವನ್ನು ಅವರ ಕುಟುಂಬವರ್ಗ ತಾಳಿಕೊಳ್ಳುವ ಶಕ್ತಿಯನ್ನು ಪರಮಾತ್ಮ ಕರುಣಿಸಲಿ. ಅವರ ನಿಧನದಿಂದ ಸಮಾಜ ಒಬ್ಬ ಸಕ್ರಿಯ ಜನಸೇವಕನನ್ನು ಕಳೆದುಕೊಂಡಂತಾಗಿದೆ ಎಂದು ಕಾಲೇಜಿನ ಆಡಳಿತ, ಬೋಧಕ ಹಾಗೂ ಬೋಧಕೇತರ ವರ್ಗ ಸಂತಾಪ ಸೂಚಿಸಿ, ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿದ್ದಾರೆ.



ಗ್ರಾಮಸಭೆಗೆ ಗೈರು: ಅಸಮಾಧಾನ
ಸಕಲೇಶಪುರ: ತಾಲೂಕಿನ ಚಂಗಡಹಳ್ಳಿ ಗ್ರಾಮಸಭೆಗೆ ಅಧಿಕಾರಿಗಳ ಗೈರು ಹಾಜರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಹೊಸೂರು ಗ್ರಾಮಸಭೆಗೂ ಅಧಿಕಾರಿಗಳು ಬಂದಿರಲಿಲ್ಲ. ಹಾಗಾಗಿ ಗ್ರಾಮಸ್ಥರು ಅಧಿಕಾರಿಗಳ  ವರ್ತನೆಯನ್ನು ಬಹಿರಂಗವಾಗಿಯೇ ಟೀಕಿಸಿದ್ದರು. ಈಗ ಚಂಗಡಿಹಳ್ಳಿ  ಗ್ರಾಮದಲ್ಲಿಯೂ ಇಂತಹುದೇ ಪ್ರಕರಣ ಮರುಕಳಿಸಿದೆ. ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಪಂಚಾಯಿತಿ ಸದಸ್ಯರು ಪಂಚಾಯಿತಿ ಸಭೆಗಳಿಗೆ ಪದೇ ಪದೇ ಗೈರು ಹಾಜರಾದರೆ, ಅವರ ಸದಸ್ಯತ್ವ ರದ್ದುಪಡಿಸಲಾಗುತ್ತದೆ. ಅಧಿಕಾರಿಗಳ ವಿರುದ್ಧವೂ ಇಂತಹ ಕಠಿಣ ಕ್ರಮ ಕೈಗೊಳ್ಳುವ ಕಾನೂನು ರೂಪಿಸಬೇಕು ಎಂದಿದ್ದಾರೆ.
ರಸ್ತೆ ದುರಸ್ತಿಗೆ ಆಗ್ರಹ
ರಾಮನಾಥಪುರ: ರಾಮನಾಥಪುರದಿಂದ ಸಂಗೀತಗ್ರಾಮ ರುದ್ರಪಟ್ಟಣ, ಹನ್ಯಾಳು ಮಾರ್ಗ ಸೋಪುರಕ್ಕೆ  ಹೋಗುವ ರಸ್ತೆ ಹಳ್ಳ ದಿಣ್ಣೆ ಹಾಗೂ ಗುಂಡಿಬಿದ್ದು ಹಾಳಾಗಿದೆ ಎಂದು ತಾಪಂ ಮಾಜಿ ಉಪಾಧ್ಯಕ್ಷ ಸೋಪುರ ದ ಶ್ರೀಶೈಲ ಅವರು ಶಾಸಕರಿಗೆ ತಿಳಿಸಿ ಕೂಡಲೇ ರಸ್ತೆ ದುರಸ್ತಿ ಮಾಡಿಸುವಂತೆ ಒತ್ತಾಯಿಸಿದ್ದಾರೆ.  ಅರಕಲಗೂಡು ತಾಲೂಕಿನ ಬಹುತೇಕ ರಸ್ತೆಗಳು ಹದಗೆಟ್ಟು ಅರ್ಧ ಅಡಿ ಅಳದ ಗುಂಡಿಗಳಲ್ಲಿ ವಾಹನ ಚಾಲನೆ ಮಾಡಲು ಸರ್ಕಸ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಈಗಲಾದರೂ ಉತ್ತಮ ರೀತಿ ರಸ್ತೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.