ಹಾಸನ

ವಿದ್ಯಾರ್ಥಿಗಳಿಂದ ನೃತ್ಯಾಭ್ಯಾಸ

Published On :

ಕ.ಪ್ರ.ವಾರ್ತೆ  ಅರಸೀಕೆರೆ  ಆ. 14
67ನೇ ಸ್ವಾತಂತ್ರ್ಯೋತ್ಸವದಲ್ಲಿ ಅತ್ಯಾಕರ್ಷಕ ಜಾನಪದ ಕಲಾತಂಡಗಳೊಂದಿಗೆ ನಾಡು ನುಡಿ ಸಂಸ್ಕೃತಿಯನ್ನು ಸಾರುವ ಸ್ತಬ್ಧಚಿತ್ರಗಳೊಂದಿಗೆ ಅದ್ದೂರಿ ಮೆರವಣಿಗೆ ಆಯೋಜಿಸಲು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ  ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ವಿವಿಧ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳ ನೃತ್ಯಾಭ್ಯಾಸದಲ್ಲಿ ತೊಡಗಿದ್ದಾರೆ.
ಈ ಬಾರಿ ಪಟ್ಟಣದ ಜೇನುಕಲ್ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಪೂರ್ವದ ಘಟನಾವಳಿಗಳನ್ನು ನೆನಪಿಸುವ ದೇಶಭಕ್ತಿಗೀತೆಗಳ ನೃತ್ಯದ ಮೂಲಕ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಕ್ಕಳು ಹೊಸ ಇತಿಹಾಸ ಸೃಷ್ಟಿಸಲಿದ್ದು  ಇದರ ಪೂರ್ವ ಸಿದ್ಧತೆಯಾಗಿ ಆಯಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಈ ಘಟನಾವಳಿಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ.
ರಾಷ್ಟ್ರೀಯ ಹಬ್ಬದ ಮುನ್ನಾ ದಿನವಾದ ಮಂಗಳವಾರ ಪುರಸಭೆ ಕಾರ್ಮಿಕರು ಕ್ರೀಡಾಂಗಣ, ಪಥಸಂಚಲನ ನಡೆಯುವ ಮಾರ್ಗ, ಸ್ತಬ್ಧಚಿತ್ರಗಳ ಮೆರವಣಿಗೆ ಬರುವ ರಸ್ತೆಗಳನ್ನು ಸ್ವಚ್ಚಗೊಳಿಸಿದರು.
15ರಂದು ಗುರುವಾರ ಬೆಳಗ್ಗೆ 9 ಕ್ಕೆ ತಹಶೀಲ್ದಾರ್ ಕೇಶವಮೂರ್ತಿ ಧ್ವಜಾರೋಹಣ ನೆರವೇರಿಸುವರು. ಶಾಸಕ ಕೆ.ಎಂ.ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸುವರು. ಬೇಲೂರು ಶಾಸಕ ವೈ.ಎನ್.ರುದ್ರೇಶ್‌ಗೌಡ ಸೇರಿದಂತೆ ಎಲ್ಲ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವರು.
ಪ್ಲಾಸ್ಟಿಕ್ ಧ್ವಜ ನಿಷೇಧ:  ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ಬಳಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಈಗಾಗಲೆ ಆದೇಶ ಹೊರಡಿಸಿದ್ದಾರೆ. ಆದರೂ ಪಟ್ಟಣದ ಕೆಲ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬರುತ್ತಿದೆ. ಈ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನ ಹರಿಸಬೇಕಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.