ಹಾಸನ

'ಮಹನೀಯರ ನೆನಪು ಸದಾ ಇರಲಿ'

Published On :

ಕ.ಪ್ರ.ವಾರ್ತೆ   ಹಾರನಹಳ್ಳಿ   ಆ.15
ಹಾರನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಹೊಯ್ಸಳ ವೇದಿಕೆಯಲ್ಲಿ 67ನೇ ಸ್ವಾತಂತ್ರ್ಯೋತ್ಸವವನ್ನು  ವೈಭವದಿಂದ ಆಚರಿಸಲಾಯಿತು. ಗ್ರಾಪಂ ಉಪಾಧ್ಯಕ್ಷ ಬಸವರಾಜ್ ಧ್ವಜಾರೋಹಣ ನೆರವರಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ನಾಮ್ದೇವ್ ಮಾತನಾಡಿ, ಅನೇಕ ಮಹನೀಯರ ತ್ಯಾಗ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅಂತಹ ಸ್ವಾತಂತ್ರ್ಯವನ್ನು ಉಳಿಸುವ ಪ್ರಯತ್ನವನ್ನು ಯುವಕರು ಮಾಡಬೇಕಾಗಿದೆ ಹಾಗೂ ದೇಶಕ್ಕೆ ಸೇವೆ ಸಲ್ಲಿಸಿದ ಮಹನೀಯರ ನೆನಪು ನಮ್ಮಲ್ಲಿ ಸದಾ ಕಾಲ ಇರಬೇಕೆಂದರು.
ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎಚ್.ಕೆ.ಮಾದಪ್ಪ ಮಾತನಾಡಿ, ಹಾರನಹಳ್ಳಿ ಹಿಂದೆ ತಾಲೂಕು ಕೇಂದ್ರವಾಗಿತ್ತು. ಈ  ಗ್ರಾಮದಲ್ಲಿ ಅನೇಕ ಜನ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿ ಅಗ್ರಪಂಕ್ತಿಯಲ್ಲಿದ್ದಾರೆ. ಅಂತಹ ಮಹನೀಯರ ಆದರ್ಶವನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಕಾರ್ಯ ಕೈಕೊಂಡು ಗ್ರಾಮದ ಅಭಿವೃದ್ಧಿಗೆ ಮುಂದಾಗ ಬೇಕೆಂದರು.
ಹಾರನಹಳ್ಳಿ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಸ್.ಧನಂಜಯ ಮಾತನಾಡಿ,  ಹಾರನಹಳ್ಳಿ ಚಿಕ್ಕೀರಣ್ಣ, ಶಿವಲಿಂಗಪ್ಪ, ದತ್ತಿ ನಿಧಿಯಿಂದ ಸುಮಾರು 20 ವರ್ಷಗಳಿಂದ ಹೆಚ್ಚಿನ ಅಂಕಗಳಿಸಿದ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರೋತ್ಸಾಹ ಧನವನ್ನು ನಮ್ಮ ಅಣ್ಣ ಹಾರನಹಳ್ಳಿ ಸಿದ್ದಪ್ಪನವರು ನೀಡುತ್ತಾ ಬಂದಿದ್ದಾರೆ. ಈ ವರ್ಷ ಸುಮಾರು 25 ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರೋತ್ಸಾಹ ಧನ ನೀಡಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಚೆನ್ನಾಗಿ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು.
ಶಿಕ್ಷಕ ಎಚ್.ಪಿ. ಬಸಪ್ಪ ಹಾಗೂ ಗ್ರಾಪಂ ಉಪಾಧ್ಯಕ್ಷ ಬಸವರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಸರ್ಕಾರಿ ಪ್ರೌಢಶಾಲೆ, ಜೇನುಗಿರಿ ವಿದ್ಯಾಸಂಸ್ಥೆ, ಸರ್ಕಾರಿ ಪ್ರಾಥಮಿಕ ಪಾಠಶಾಲೆ, ಎಸ್.ಟಿ.ಜೆ, ಉರ್ದು ಪ್ರಾಥಮಿಕ ಪಾಠಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ರೈತ ಸಂಘದ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್, ನಿವೃತ್ತ ಮುಖ್ಯೋಪಾಧ್ಯಾಯ  ಶಿವಲಿಂಗಮೂರ್ತಿ, ಗ್ರಾಪಂ ಸದಸ್ಯ ಓಂಕಾರಮೂರ್ತಿ ಮಹೇಶ್ ಪಾರ್ವತಮ್ಮ, ಕೃಷ್ಣಪ್ಪ, ಗ್ರಾಮದ ಹಿರಿಯರಾದ ರಂಗಪ್ಪ, ಗುರುಲಿಂಗಪ್ಪ, ಸೋಮಶೇಖರ್ ಶೆಟ್ಟಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.