ವಿವಿಧೆಡೆ ಸ್ವಾತಂತ್ರ್ಯೋತ್ಸವ
ಹಾಸನ: ನಗರದ ಬಿ.ಎಂ.ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಗುರುವಾರ 67ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಶಿವರಾಂ ಪಕ್ಷದ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷ ನಾರಾಯಣಗೌಡ, ಮುಖಂಡ ಮಲ್ಲೇಶ್, ಡಾ. ಎಚ್.ನಾಗರಾಜ್, ಎಚ್.ಕೆ.ಜವರೇಗೌಡ ಹಾಗೂ ಇತರರು ಇದ್ದರು.
ಬಿಜೆಪಿ ಕಚೇರಿಯಲ್ಲಿ: ನಗರದ ಎನ್.ಆರ್.ವೃತ್ತದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ರೇಣುಕುಮಾರ್ ಧ್ವಜಾರೋಹಣ ನೆರವೇರಿಸಿದರು. ಮುಖಂಡ ಮಂಜುನಾಥ್ಮೋರೆ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಎಂ.ಎಸ್.ಕೃಷ್ಣೇಗೌಡ, ಪ್ರಸನ್ನ ಕುಮಾರ್, ಮಂಜುನಾಥ್ಶರ್ಮಾ ಇತರರು ಇದ್ದರು.
ಮಧ್ಯರಾತ್ರಿ ಧ್ವಜಾರೋಹಣ : ನಗರದ ಹೇಮಾವತಿ ಪ್ರತಿಮೆ ಬಳಿ ಇರುವ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಬಾಳ್ಳುಗೋಪಾಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಕೀಲರಾದ ಶ್ಯಾಮ ಸುಂದರ್, ಪ್ರಶಾಂತ್, ಸಮಾಜ ಸೇವಕ ಕೆ.ಸ್ವರೂಪ್ ಇತರರು ಪಾಲ್ಗೊಂಡಿದ್ದರು.
ಶ್ರವಣಬೆಳಗೊಳ ಮಂಡಳದಿಂದ: ಚನ್ನರಾಯಪಟ್ಟಣದ ಬಿಜೆಪಿ ಶ್ರವಣಬೆಳಗೊಳ ಮಂಡಳ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ದ್ವಜಾರೋಹಣ ತಾ. ಘಟಕ ಅಧ್ಯಕ್ಷದ ರಂಗೇಗೌಡ ನೆರವೇರಿಸಿದರು. ಮಂಡಳದ ಪ್ರಧಾನ ಕಾರ್ಯದರ್ಶಿ ಪಿ.ಓ. ಗಂಗಾಧರ, ಶೋಭಶುಭಾಕರ್, ಸಿ.ಟಿ. ಗಣೇಶ್, ಎಸ್.ಟಿ. ಮೋರ್ಚಾ ಅಧ್ಯಕ್ಷ ಎಸ್.ಎಲ್. ರಾಮು, ದೊಡ್ಡೇಗೌಡರು, ಕನ್ನಡ ವಾಸು, ಮಹೇಶ್ ಇತರರು ಭಾಗವಹಿಸಿದ್ದರು.
ಜಾವಗಲ್ನಲ್ಲಿ : ಪಟ್ಟಣದ ವಿವಿಧೆಡೆ ಸಡಗರದಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲ ವಸಂತರಾಜ್ ಅರಸ್ ಧ್ವಜಾರೋಹಣ ನೆರವೇರಿಸಿದರು. ಉಪನ್ಯಾಸಕ ಮಂಜುನಾಥ್ ಮಾತನಾಡಿ, ದೇಶ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದರೂ ಆರ್ಥಿಕ ಸಾಮಾಜಿಕ, ಶೈಕ್ಷಣಿಕವಾಗಿ ಇನ್ನೂ ಸಂಪೂರ್ಣವಾಗಿ ಪ್ರಗತಿ ಕಂಡಿಲ್ಲಾ. ಜಾಗತೀಕರಣದಿಂದಾಗಿ ಭಾರತದ ಸಂಪತ್ತನ್ನು ಲೂಟಿ ಮಾಡುವ ಪ್ರಯತ್ನ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದರು. ಯುವಜನತೆ ದೇಶದ ರಕ್ಷಣೆ ಮತ್ತು ಪ್ರಗತಿಗಾಗಿ ಶ್ರಮಿಸ ಬೇಕು ತ್ಯಾಗ, ಬಲಿದಾನ, ಹೋರಾಟ, ಕರ್ತವ್ಯಪ್ರಜ್ಞೆ ಬೆಳೆಸಿಕೊಳ್ಳ ಬೇಕು ಎಂದರು.
ಮೈಸೂರು ವಿವಿಯ ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕಗಳಿಸಿದ ಜಾವಗಲ್ ಮಹಮದ್ ಸುಹೀಲ್ನನ್ನು ಆಟೋಚಾಲಕರ ಸಂಘ, ವೀರಕನ್ನಡಿಗ ಟಿಪ್ಪೂಸುಲ್ತಾನ್ ಸೇನೆ ಹಾಸನ ಘಟಕ, ಬಿಸಿಸಿ ಗೆಳೆಯರ ಸಂಘದವತಿಯಿಂದ ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

