ಹಾಸನ

ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಭವನ ಉದ್ಘಾಟನೆ

Published On :

ಕನ್ನಡಪ್ರಭ ವಾರ್ತೆ   ಹಾಸನ   ಆ.15
ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಗರದಲ್ಲಿ ಗುರುವಾರ ಜಿಲ್ಲಾ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಕಚೇರಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ  ಸ್ವಾತಂತ್ರ್ಯ ಹೋರಾಟಗಾರ ವೆಂಕಟಸುಬ್ಬು(ಕಸ್ತೂರಿ)  ಮಾತನಾಡಿ, ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ದೊರೆಯಬೇಕಾದರೆ ಭ್ರಷ್ಟಾಚಾರ ನಿರ್ಮೂಲನೆಯಾಗಬೇಕು.ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಬಾಳುವಂತಾಗಬೇಕು ಎಂದ ಅವರು, ಸ್ವಾತಂತ್ರ್ಯ ಹೋರಾಟಗಾರರಿಗೆ ದೊರೆಯಬೇಕಾದ ಸೌಲಭ್ಯ ಕೂಡಲೇ ಒದಗಿಸುವಂತೆ ಸಚಿವರ ಗಮನಕ್ಕೆ ತಂದರು. ಜಿಲ್ಲಾಧಿಕಾರಿ ಅನ್ಬುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಉಪೇಂದ್ರ ಪ್ರತಾಪಸಿಂಗ್, ಸ್ವಾತಂತ್ರ್ಯ ಹೋರಾಟಗಾರರ ಸಂಘದ ಕಾರ್ಯಾಧ್ಯಕ್ಷ ಎಚ್.ಎಂ.ಶಿವಣ್ಣ, ಗೌರವ ಕಾರ್ಯದರ್ಶಿ ಮುದ್ದೇಗೌಡ, ಸ್ವಾತಂತ್ರ್ಯ ಹೋರಾಟಗಾರ ಶಂಕರ ನಾರಾಯಣ,ಶ್ರೀನಿವಾಸ್ ಐಯ್ಯಂಗಾರ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.