ರಕ್ತದಾನ ಶಿಬಿರ, ಗಿಡ ನೆಡುವ ಮೂಲಕ ಸ್ವಾತಂತ್ರ್ಯೋತ್ಸವ
ಕ.ಪ್ರ.ವಾರ್ತೆ ಸಕಲೇಶಪುರ ಆ.15
ನಾನಾ ಸಂಘಟನೆಗಳು ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ಮೂಲಕ ಪಟ್ಟಣದಲ್ಲಿ ಹಬ್ಬದ ಕಳೆ ಹೊಮ್ಮಿಸಿದರು. ಕಾರು ಚಾಲಕರ ಸಂಘ ಹಾಗೂ ಆಟೋ ಚಾಲಕರ ಸಂಘದಿಂದ ಹಳೇ ಬಸ್ ನಿಲ್ದಾಣ ಸಮೀಪದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಶ್ರೀರಾಮಸೇನೆ ಹಾಗೂ ನಂಜಮ್ಮ ಮಹಿಳಾ ಸಮಾಜವತಿಯಿಂದ ಸಂಘದ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಈ ಸಂದರ್ಭದಲ್ಲಿ ಬಾಲನಿಕೇತನ ಹಾಗೂ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಗಿಡಗಳನ್ನು ನೆಡಲಾಯಿತು.
ಲಯನೆಸ್ ಹಾಗೂ ರೋಟರಿ ಸಂಸ್ಥೆಗಳು ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ನಡೆಸುವ ಮೂಲಕ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ಆಚರಿಸಿದರು.
ಅಶೋಕ ರಸ್ತೆಯಲ್ಲಿ ಗೆಳೆಯ ಬಳಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಪ್ರಸನ್ನಕುಮಾರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ವರ್ತಕರ ಸಂಘ ಲಾಬಾಬಿನ್ ಮಸೀದಿ ರಸ್ತೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಯಾದಗಾರ್ ಇಬ್ರಾಹಿಂ ಧ್ವಜಾರೋಹಣ ನೆರವೆರಿಸಿದರು. ನಾನಾ ಸಂಘ ಸಂಸ್ಥೆಗಳು ಕಾಯಿ ಒಡೆಯುವುದು, ಕುಂಟೆಬಿಲ್ಲೆಯಂತಹ ಆಟೋಟಗಳನ್ನು ಆಯೋಜಿಸಿದ್ದವು. ಒಟ್ಟಾರೆ ಪಟ್ಟಣದ ಎಲ್ಲಾ ರಸ್ತೆಗಳು ತ್ರಿವರ್ಣ ಧ್ವಜದೊಂದಿಗೆ ಕಂಗೊಳಿಸುತ್ತಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

