ಸರ್ಕಾರದ ಸೌಲಭ್ಯ ಮಧ್ಯವರ್ತಿಗಳ ಪಾಲು: ಶಾಸಕ ಬಾಲಕೃಷ್ಣ ವಿಷಾದ
ಚನ್ನರಾಯಪಟ್ಟಣ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 67ನೇ ಸ್ವಾತಂತ್ರ್ಯೋತ್ಸವ ಅದ್ದೂರಿ ಹಾಗೂ ಸಂಭ್ರಮದಿಂದ ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಚರಿಸಲಾಯಿತು.
ತಹಸೀಲ್ದಾರ್ ನಟರಾಜ್ ಧ್ವಜಾರೋಹಣ ನೆರವೇರಿಸಿದರು. ಪಟ್ಟಣದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಪೊಲೀಸ್, ಗೃಹರಕ್ಷಕ ದಳ, ಎನ್ಸಿಸಿ ಕೆಡೆಟ್ಗಳಿಂದ ತಹಸೀಲ್ದಾರ್ ಹಾಗೂ ಶಾಸಕ ಸಿ.ಎನ್.ಬಾಲಕೃಷ್ಣ ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು.
ಪ್ರಗತಿ ಪರ ರೈತ ಕಂಬೇಗೌಡ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಮೂರು ದಶಕಗಳಿಂದ ಪತ್ರಿಕೆಗಳನ್ನು ವಿತರಣೆ ಮಾಡುತ್ತಿರುವ ವಿಶ್ವೇಶ್ವರಯ್ಯ, ಕರ್ತವ್ಯದಲ್ಲಿ ಮೃತಪಟ್ಟ ಯೋಧ ಯೋಗಾನಂದ ಕುಟುಂಬವರ್ಗಕ್ಕೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ತಾಲೂಕು ಆಡಳಿತದಿಂದ ಗೌರವಿಸಲಾಯಿತು.
ತಾಲೂಕಿನ 7ಹೋಬಳಿಗಳಿಂದ ಒಂದೊಂದು ಶಾಲೆಯ ವಿದ್ಯಾರ್ಥಿಗಳು ಹಾಗೂ ಪಟ್ಟಣದ ವಿವಿದ ಶಾಲೆಗಳಿಂದ ಏರ್ಪಡಿಸಿದ್ದ ದೇಶಭಕ್ತಿಗೀತೆ ನೃತ್ಯಗಳು ಜನಮನ ಸೂರೆಗೊಂಡಿತು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಬಾಲಕೃಷ್ಣ ಮಾತನಾಡಿ ಸಾವಿರಾರು ಮಂದಿ ಹೋರಾಟದ ಫಲವಾಗಿ ನಾವಿಂದು ಸ್ವಾತಂತ್ರ್ಯ ಪಡೆದಿದ್ದೇವೆ. ಅದನ್ನು ನಾವು ಉಳಿಸಿಕೊಂಡು ಹೋಗುವುದು ತಮ್ಮ ಕರ್ತವ್ಯವಾಗಿದೆ. ದೇಶದ ಐಕ್ಯತೆ ಹಾಗೂ ಒಗ್ಗಟ್ಟನ್ನು ಕಾಪಾಡಿಕೊಂಡು ಹೋಗುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ತಹಸೀಲ್ದಾರ್ ನಟರಾಜ್ ಮಾತನಾಡಿ ಬಡತನ ನೀಗಿಸಲು ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದ್ದು, ಅವುಗಳು ಸಮಾಜದ ಕೆಳಮಟ್ಟದ ಜನತೆಗೆ ತಲುಪದೆ ಮಧ್ಯವರ್ತಿಗಳ ಪಾಲಾಗುತ್ತಿರುವುದು ವಿಷಾದನೀಯ ಅದನ್ನು ತಡೆಯುವತ್ತಾ ಸಾರ್ವಜನಿಕರು ಪ್ರಯತ್ನಿಸಬೇಕು ಎಂದರು.
ಜಿಪಂ ಸದಸ್ಯ ಕುಸಮಾ ಬಾಲಕೃಷ್ಣ, ಶಿವಶಂಕರ್ ಕುಂಠೆ, ದೇವಿಕಾ ಪ್ರಕಾಶ್, ತಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಶಿಲ್ಪಾಶ್ರೀನಿವಾಸ್, ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್, ಟಿಎಪಿಸಿಎಂಎಸ್ ಅಧ್ಯಕ್ಷ ಕಾಳೇಗೌಡ, ತಾಲೂಕು ಪಂಚಾಯಿತಿ ಸದಸ್ಯರಾದ ಬಸವರಾಜು, ರಘು, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ಕುಮಾರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

