ಕೃಷಿ ಕಾರ್ಯಾನುಭವ ಶಿಬಿರದಲ್ಲಿ ತಜ್ಞರ ವಿಚಾರ ವಿನಿಮಯ
ಕ.ಪ್ರ.ವಾರ್ತೆ ಹಾಸನ ಜು. 15
ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಹಾಸನ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಜಿಲ್ಲೆಯ ಅಭಿವೃದ್ಧಿ ಇಲಾಖಾ ಅಧಿಕಾರಿಗಳು, ರೈತ ಮುಖಂಡರು, ಕೃಷಿ ಮಹಾವಿದ್ಯಾಲಯದ ತಜ್ಞರು ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ನಡುವೆ ವಿಚಾರ ವಿನಿಮಯ ನಡೆಯಿತು.
ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಶಿವರಾಜು ಮಾತನಾಡಿ, ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಇಲಾಖೆ ಜೊತೆಗೆ ಇತರೇ ಅಭಿವೃದ್ಧಿ ಇಲಾಖೆಗಳ ಮತ್ತು ರೈತರ ಸಹಭಾಗಿತ್ವದೊಂದಿಗೆ ಕಾರ್ಯಕ್ರಮ ರೂಪಿಸಿ ವಿದ್ಯಾರ್ಥ್ಥಿಗಳಿಗೆ ಕಲಿಕೆಗೆ ಅವಕಾಶ ನೀಡಬೇಕೆಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಶಿಬಿರದ ಪ್ರಯುಕ್ತ ಏರ್ಪಡಿಸುವ ಕೃಷಿ ವಸ್ತುಪ್ರದರ್ಶನಕ್ಕೆ ಕೃಷಿ ಮಂತ್ರಿ ಕೃಷ್ಣಬೈರೇಗೌಡ ಅವರನ್ನು ಆಹ್ವಾನಿಸುವುದಾಗಿ ಹೇಳಿದರು.
ಕೃಷಿ ಮತ್ತು ಇತರೇ ಇಲಾಖಾ ಅಧಿಕಾರಿಗಳು, ಕೃಷಿ ಮಹಾ ವಿದ್ಯಾಲಯದ ತಜ್ಞರು, ರೈತ ಮುಖಂಡರು ಹಾಗೂ ಶಿಬಿರಾರ್ಥಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ರೂಪಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಸಂಯೋಜಕ ಡಾ. ಡಿ. ರಘುಪತಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಾಸನ ಹಾಗೂ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆಯ್ಕೆಗೊಂಡ ರೈತ ಸಂಪರ್ಕ ಕೇಂದ್ರಗಳಾದ ಶಾಂತಿ ಗ್ರಾಮ, ಸಾಲಗಾಮೆ, ಉದಯಪುರ, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ನುಗ್ಗೆಹಳ್ಳಿ, ಬಾಗೂರು ಹಾಗೂ ದುದ್ದ ಮತ್ತು ಅವುಗಳ ವ್ಯಾಪ್ತಿಯಲ್ಲಿ ಶಿಬಿರದ ಅಂಗವಾಗಿ ಆಯ್ಕೆಗೊಂಡ ಮರ್ಕುಲಿ, ಕೊಂಡಜ್ಜಿ, ಉಪ್ಪಿನಹಳ್ಳಿ, ದಿಂಡಗೂರು, ಜಿನ್ನೇನಹಳ್ಳಿ, ವಿರೂಪಾಕ್ಷಪುರ, ಮಲ್ಲೇನ ಹಳ್ಳಿ ಮತ್ತು ಹೆರಗು ಗ್ರಾಮಗಳಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ವಿಸ್ತರಣಾ ಕಾರ್ಯಕ್ರಮಗಳ ಕುರಿತು ಕಿರು ಪರಿಚಯ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಕೃಷಿ ಮಹಾ ವಿದ್ಯಾಲಯದ ಡೀನ್ ಡಾ. ಮಹಾಬಲೇಶ್ವರ ಹೆಗಡೆ ಮಾತನಾಡಿ, ಗ್ರಾಮಸ್ಥರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಸಂಪೂರ್ಣ ಸಹಕಾರ ನೀಡುವು ದರ ಜೊತೆಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ತಿಳಿಸಿದರು.
ತಾಲೂಕು ಸಹಾಯಕ ಕೃಷಿ ನಿರ್ದೇಶಕ ರಾಮಹನುಮಯ್ಯ, ವಿಸ್ತರಣಾ ತಜ್ಞ ಡಾ. ಜಿ. ನಾಗೇಶ ಮಾತನಾಡಿದರು. ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಪೂರ್ವ ಸಿದ್ಧತೆಯಾಗಿ ರೈತರ ಬೆಳೆಗಳು ಹಾಗೂ ವಾಸ್ತವಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ವಿಶ್ಲೇಶಿಸಿದ ವಿವರಗಳನ್ನು ಪ್ರದರ್ಶಿಸಿದರು.
ಆಹಾರ ಮತ್ತು ತಂತ್ರಜ್ಞಾನದ ಸಹಾಯಕ ಪ್ರಾಧ್ಯಾಪಕಿ ಭಾರತಿ ಮಿರಾಜ್ಕರ್ ವಂದಿಸಿದರು. ಕೃಷಿ ವಿದ್ಯಾರ್ಥಿನಿ ಅಕ್ಷಿತ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

