ಹೊಳೆನರಸೀಪುರದಲ್ಲಿ ತಾಲೂಕು ದಸರಾ ಕ್ರೀಡಾಕೂಟ ಇಂದು
ಹೊಳೆನರಸೀಪುರ: ತಾಲೂಕು ಪಂಚಾಯ್ತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ 2013-14ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವನ್ನು ಆ.17ರಂದು ಬೆಳಗ್ಗೆ 10 ರಿಂದ ಪಟ್ಟಣದ ಹೇಮಾವತಿ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ತಾಪಂ ಕಾರ್ಯನಿರ್ವಾಹಣಾಧಿಕಾರಿ ತಿಳಿಸಿದ್ದಾರೆ. ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ವಯಸ್ಸಿನ ನಿರ್ಬಂಧವಿಲ್ಲ. ಆದರೆ ರಕ್ಷಣಾ ಹಾಗೂ ಅರೆರಕ್ಷಣಾ ಪಡೆಗಳವರು ಭಾಗವಹಿಸುವಂತಿಲ್ಲ. ಸ್ಪರ್ಧಿಗಳು ಯಾವುದಾದರೂ 2 ಆಟ ಹಾಗೂ ರಿಲೇ ಸೇರಿ ಅಥ್ಲೆಟಿಕ್ಸ್ನಲ್ಲಿ ಯಾವುದಾದರೂ 3 ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಬಹುದಾಗಿದೆ. ಕ್ರೀಡಾಕೂಟದಲ್ಲಿ ಹೊರ ಜಿಲ್ಲೆಗಳವರು ಭಾಗವಹಿಸುವಂತಿಲ್ಲ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಕ್ರೀಡಾಪಟುಗಳೆ ತರಬೇಕು ಎಂದು ಕ್ರೀಡಾಕೂಟದ ನಿಯೋಜಕ ತಾಲೂಕು ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎನ್.ನಾಗರಾಜ್ ತಿಳಿಸಿದ್ದಾರೆ. 17ರಂದು ನಡೆಯಲಿರುವ ದಸರಾ ಕ್ರೀಡಾಕೂಟದಲ್ಲಿ ಕಬ್ಬಡಿ, ಖೋಖೋ, ವಾಲಿಬಾಲ್, ಬಾಲ್ಬ್ಯಾಡ್ ಮಿಂಟನ್ ಫುಟ್ಬಾಲ್ (ಪುರುಷರಿಗೆ ಮಾತ್ರ) ಉಳಿದ ಆಟಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಆಯ್ಕೆ ನಡೆಸಲಾಗುವುದು.
ಅಥ್ಲೆಟಿಕ್ಸ್ ವಿಭಾಗದಲ್ಲಿ - 100ಮೀ, 200ಮೀ, 400ಮೀ, 800ಮೀ, 1500ಮೀ, 3000 ಮೀ(ಮಹಿಳೆಯರಿಗಾಗಿ), 5000ಮೀ, 4್ಢ100ಮೀ ರಿಲೇ, 100್ಢ400ಮೀ ರಿಲೇ, ಎಸೆತಗಳು -ಗುಂಡು ಎಸೆತ, ಡಿಸ್ಕಸ್ ಎಸೆತ, ಜಾವೆಲಿನ್ ಎಸೆತ, ನೆಗೆತಗಳು - ಉದ್ದ ಜಿಗಿತ, ಎತ್ತರ ಜಿಗಿತ, ಟ್ರಿಪಲ್ಜಂಪ್ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

