ಸುಶಿಕ್ಷಿತ ಸಮಾಜದಿಂದ ದೇಶ ಅಭಿವೃದ್ಧಿ: ಮಂಜುನಾಥರಾವ್
ಕ.ಪ್ರ.ವಾರ್ತೆ ಅರಸೀಕೆರೆ ಆ. 16
ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಮಂಜುನಾಥರಾವ್ ತಿಳಿಸಿದರು.
ಪಟ್ಟಣದಲ್ಲಿನ ಸೇವಾ ಸಂಕಲ್ಪ ವಿದ್ಯಾ ಸಂಸ್ಥೆಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನವೇ ವಿದ್ಯಾದಾನವಾಗಿದೆ. ವಿದ್ಯೆಯನ್ನು ಯಾರೂ ಅಪಹರಿಸಲು ಸಾಧ್ಯವಿಲ್ಲ, ಕಾರಣ ಸಮಾಜದ ಪ್ರತಿ ಮಕ್ಕಳಿಗೂ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಉತ್ತಮ ಪ್ರಜೆಯಾಗಿ ಬೆಳೆಸಿದರೆ ಆತ ಮನೆಗೂ ಹಾಗೂ ಈ ದೇಶಕ್ಕೂ ಒಳ್ಳೆಯ ಕೀರ್ತಿಯನ್ನು ತರುತ್ತಾನೆ ಎಂದರು.
ಅನೇಕ ಕುಟುಂಬಗಳಲ್ಲಿ ಪ್ರತಿಭಾನ್ವಿತ ಮಕ್ಕಳಿದ್ದು, ಆವರಿಗೆ ಸೂಕ್ತ ಸಹಾಯ ದೊರಕದ ಕಾರಣ ಹೆಚ್ಚಿನ ವ್ಯಾಸಂಗ ಮಾಡಲು ಅಸಾಧ್ಯವಾದ ಪರಿಸ್ಥಿತಿ ಇದೆ. ಅಂತಹ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಶ್ರೀಮಂತರು ವಿದ್ಯಾದಾನ ಮಾಡಿಸಿದರೇ ಅವರಿಗೆ ಕೋಟಿ ಪುಣ್ಯ ಪ್ರಾಪ್ತವಾಗುತ್ತದೆ ಎಂದು ಹೇಳಿದರು.
ಸಮವಸ್ತ್ರದ ದಾನಿಗಳಾದ ಜಿ.ಕುಮಾರ್ ಮಾತನಾಡಿದರು. ವಿದ್ಯೆಯನ್ನು ಕಲಿತ ವ್ಯಕ್ತಿಯೂ ಸಮಾಜದ ಯಾವುದೇ ಕ್ಷೇತ್ರದಲ್ಲಿ ಸ್ವಾವಲಂಭಿಯಾಗಿ ಬದುಕಲು ಸಾಧ್ಯವಾಗಿದೆ. ಆದ್ದರಿಂದ ಸಮಾಜಕ್ಕೆ ದಾನ ಮಾಡುವರು ಹೆಚ್ಚು ಹೆಚ್ಚು ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದರೆ ಮಾತ್ರ ಸಮಾಜದಲ್ಲಿ ಸಮಾನತೆ ಮೂಡಲು ಸಾಧ್ಯ ಎಂದರು.
ಶಾಲಾ ಸಮಿತಿ ನಿರ್ದೇಶಕ ಕೆ.ಎನ್.ಸತ್ಯನಾರಾಯಣ್, ಎನ್.ಜಿ.ಮಧು, ಮೋಹನ್ಕುಮಾರ್, ರಾಮಚಂದ್ರ, ರೋಟರಿ ಸಂಸ್ಥೆ ಅಧ್ಯಕ್ಷ ಪ್ರವೀಣ್ಕುಮಾರ್,ಆನಂದ್ ಹಾಜರಿದ್ದರು. ಶಿಕ್ಷಕ ಲೋಕೇಶ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಬಸವಂತಪ್ಪ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

