ಚನ್ನರಾಯಪಟ್ಟಣ ಸರ್ಕಾರಿ ಕಚೇರಿಗಳಿಗೆ ಲೋಕಾಯುಕ್ತ ಎಸ್ಪಿ ಭೇಟಿ
ಕ.ಪ್ರ.ವಾರ್ತೆ ಚನ್ನರಾಯಪಟ್ಟಣ ಆ.17
ಲೋಕಾಯುಕ್ತ ಎಸ್ಪಿ ವೇದಮೂರ್ತಿ ಅವರು ಶನಿವಾರ ಪಟ್ಟಣದ ಸರ್ಕಾರಿ ಕಚೇರಿ ಹಾಗೂ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಥಮವಾಗಿ ತಾಲೂಕು ಕಚೇರಿಗೆ ಭೇಟಿ ನೀಡಿದ ಲೋಕಾಯುಕ್ತ ಎಸ್ಪಿ ಕಚೇರಿ ಸಿಬ್ಬಂದಿಗಳ ಗೈರು ಹಾಜರಾತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ಕೇಳಿದ್ದಕ್ಕೆ ಸಿಬ್ಬಂದಿ ಚುನಾವಣೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ನಂತರ ಅಧಿಕಾರಿಗಳು ಹಿಂದುಳಿದ ವರ್ಗಗಳ ಬಾಲಕರಿಯ ವಸತಿ ನಿಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಆಹಾರ ಮತ್ತು ನಿರ್ವಹಣೆ ಪರಿಶೀಲಿಸಿದರು ಹಾಗೂ ಗುಣಮಟ್ಟ ಮತ್ತು ಸ್ಪಚ್ಚತೆ ಕಾಯ್ದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಲೋಕಾಯುಕ್ತ ಅಧಿಕಾರಿಗಳು ಬೇಲೂರಿಗೆ ತೆರಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

