ಚೋಳರ ಕಾಲದ ದಿಡಗ ದೇವಸ್ಥಾನ ಜೀರ್ಣೋದ್ಧಾರ: ಶಾಸಕರಲ್ಲಿ ಮನವಿ
ಹಿರೀಸಾವೆ: ದಿಡಗ ಗ್ರಾಮದ ಬಾಣೇಶ್ವರಸ್ವಾಮಿ ದೇವಾಲಯ ವಿಮಾನ ಗೋಪುರ ಕಳಶಸ್ಥಾಪನೆ ಕುಂಭಾಭಿಷೇಕ ಮಹೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಸಮಾರಂಭ ಉದ್ಘಾಟಿಸಿದರು. ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಶಿವಪುತ್ರನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಬೆಂಗಳೂರು ಗಾಂಧಿ ಭವನದ ಜಂಟಿ ಕಾರ್ಯದರ್ಶಿ ಪ್ರೊ. ಜಿ.ಬಿ.ಶಿವರಾಜು ಮಾತನಾಡಿ, ದಿಡಗ ಗ್ರಾಮಕ್ಕೆ ಒಂದು ಸಾವಿರ ವರ್ಷಗಳ ಇತಿಹಾಸವಿದ್ದು ಗ್ರಾಮದಲ್ಲಿರುವ ಚೋಳರ ಕಾಲದ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡ ಬೇಕೆಂದು ಶಾಸಕರಲ್ಲಿ ಕೋರಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಈ ಭಾಗದ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯ್ಥ ಆಗಬೇಕಿದೆ. ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಇದಕ್ಕೆ ಒಂದು ಶಾಶ್ವತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಜಿಪಂ ಮಾಜಿ ಸದಸ್ಯ ಎಂ ಕೆ. ಮಂಜೇಗೌಡ, ತಾಪಂ ಮಾಜಿ ಸದಸ್ಯ ರಾಮಕೃಷ್ಣ, ತಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಶಿಲ್ಪಾ, ದಿಡಗ ಪಂಚಾಯ್ತಿ ಅಧ್ಯಕ್ಷೆ ಅನುಸೂಯ ಇದ್ದರು. ಉಪಾಧ್ಯಕ್ಷ ಶಂಕರೇಗೌಡ ಸದಸ್ಯರು, ಮಾಜಿ ಅಧ್ಯಕ್ಷ, ಮಾಜಿ ಸದಸ್ಯರು ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

