ಹಾಸನ

ಪ್ರತಿಯೊಬ್ಬರಲ್ಲೂ ಅನುರಣಿಸುವ ಕಲೆ: ಕಲಾವಿದೆ ಅಂಬಳೆ ರಾಜೇಶ್ವರಿ

Published On :

ಹಾಸನ: ನಗರದ ಸಂತಜೋಸೆಫ್ ಕಾಲೇಜಿನಲ್ಲಿ ಶನಿವಾರ ಪ್ರತಿಭಾ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಲಾವಿದೆ ಅಂಬಳೆ ರಾಜೇಶ್ವರಿ ಮಾತನಾಡಿ, ಪ್ರತಿಯೊಬ್ಬರಲ್ಲೂ ಕಲೆ ಅನ್ನೋದು ಇದ್ದೇ ಇರುತ್ತದೆ. ಅದನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಬೇಕು ಅಷ್ಟೇ. ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಹೇರ್ಸ್ಟೈಲ್ ಫ್ಯಾಶನ್ ಶೋ, ನೃತ್ಯ ಹಾಗೂ ಹಾಡುಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಸಂಸ್ಥೆಯ ಫಾದರ್ ಐವಾನ್ ಮೆಂಡೊನ್ಸ್, ಪ್ರಾಂಶುಪಾಲ ಫಾ. ರುರಾಲ್ಪ್ರ್ಟಾಡೋ ಹಾಗೂ ಉಪ ಪ್ರಾಂಶುಪಾಲೆ ಹೇಮಲತಾ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.