ಹಾಸನ

ನಾರ್ವೆ ಗ್ರಾಮದ ರಸ್ತೆ ದುರಸ್ತಿಗೊಳಿಸದಿದ್ದರೆ ಹೋರಾಟ

Published On :

ಬೇಲೂರು: ತಾಲೂಕಿನ ನಾರ್ವೆ ಗ್ರಾಮದ ಬಿಎನ್‌ಎಸ್ ರಸ್ತೆ ಹದಗೆಟ್ಟಿದ್ದು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಯಕರ್ನಾಟಕ ಅರೇಹಳ್ಳಿ ಹೋಬಳಿ ಅಧ್ಯಕ್ಷ ಮಲ್ಲಿಕಾರ್ಜುನ್ ಎಚ್ಚರಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಬಿರಡಹಳ್ಳಿಯಿಂದ ನಾರ್ವೆ, ಸೂಳೆಗುಡ್ಡ ಗ್ರಾಮಕ್ಕೆ ನೇರ ಸಂಪರ್ಕವಿರುವ ರಸ್ತೆ ಇದ್ದಾಗಿದ್ದು ರಸ್ತೆಯ ಅಲ್ಲಲ್ಲಿ ಸಾಕಷ್ಟು ಗುಂಡಿ ಬಿದ್ದು ವಾಹನ ಸಂಚಾರ ನಡೆಸಲಾಗದಷ್ಟು ದುಸ್ಥಿತಿಯಲ್ಲಿ ಈ ರಸ್ತೆಯಿದೆ. ಕಳೆದ ಕೆಲ ದಿನಗಳ ಹಿಂದೆ ಎದುರಿಗೆ ಬಂದ ವಾಹನಕ್ಕೆ ಜಾಗ ಬಿಡಲು ಹೋದ ಸಂದರ್ಭದಲ್ಲಿ ಆಟೋರಿಕ್ಷಾ ಪಲ್ಟಿಯಾಗಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನಡೆದು ಹೋಗಲು ಭಯಪಡುವಂತಾಗಿದೆ. ರಸ್ತೆಯ ಕಾಮಗಾರಿ ಶೀಘ್ರ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸದಿದ್ದಾಗ ಪ್ರತಿಭಟನೆ ನಡೆಸಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಬಗೆಹರಿಸುವ ಭರವಸೆ ನೀಡಿದ್ದರು. ಇಲ್ಲಿಯವರೆಗೆ ಗಮನಹರಿಸಿಲ್ಲ. ಕೂಡಲೇ ರಸ್ತೆ ಕಾಮಗಾರಿ ಕೈಕೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡದಿದ್ದಲ್ಲಿ ಉಗ್ರಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.