ಹಾಸನ

ಕ್ರೀಡಾಕೂಟಕ್ಕೆ ಚಾಲನೆ

Published On :

ಚನ್ನರಾಯಪಟ್ಟಣ: ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ, ಆದರೆ ಕ್ರೀಡೆಯಲ್ಲಿ ಸಾಧನೆ ಕುಸಿಯುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ವಿಷಾಧಿಸಿದರು.
ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡದ ಕಾರಣ ದೇಶದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿಲ್ಲ ಎಂದು ತಿಳಿಸಿದರು.
ಕ್ರೀಡಾಪಟುಗಳಿಗೆ ಸರ್ಕಾರ ಪ್ರೋತ್ಸಾಹ ಹಾಗೂ ಸೌಲಭ್ಯ ನೀಡಿದಲ್ಲಿ ಕ್ರೀಡಾಪಟುಗಳು ಉತ್ಸಾಹದಿಂದ ಸಾಧನೆ ಮಾಡಲು ಮುಂದಾಗುತ್ತಾರೆ. ಆದರೆ ದೇಶದಲ್ಲಿ ಕೆಲ ಕಾರಣಗಳಿಂದ ಇದು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಕ್ರೀಡಾಪಟುಗಳು ಯಾವುದೇ ಸಾಧನೆ ಮಾಡಲು ಶಾಲಾ ಕಾಲೇಜು ಮಟ್ಟದಲ್ಲಿ ನಿರಂತರ ಅಭ್ಯಾಸ ಬಹುಮುಖ್ಯ. ದೈಹಿಕ ಶಿಕ್ಷಕರು ಈ ನಿಟ್ಟಿನಲ್ಲಿ ತಮ್ಮ ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರತೆಗೆಯಲು ಮುಂದಾಗಬೇಕು ಎಂದರು.
ಪಟ್ಟಣದ ಕ್ರೀಡಾಂಗಣವನ್ನು ಉನ್ನತೀಕರಿಸುವ ಉದ್ದೇಶ ಹೊಂದಿದ್ದು, ಮುಂದಿನ ದಿನಗಳಲ್ಲಿ ಕ್ರೀಡಾ ಇಲಾಖೆ ಜತೆಗೆ ಜಿಲ್ಲಾ ಪಂಚಾಯಿತಿ ಇಲಾಖೆಯಿಂದ ಅನುದಾನ ನೀಡಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಹೇಳಿದರು.
ತಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಶಿಲ್ಪಾಶ್ರೀನಿವಾಸ್, ಜಿಪಂ ಸದಸ್ಯೆ ಕುಸುಮಾಬಾಲಕೃಷ್ಣ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್‌ಕುಮಾರ್, ಹಿಂದೂಸ್ಥಾನ್ ಆಗ್ರೆ ಲಿ.ನ ವೀರಭದ್ರಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಅಣ್ಣೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.