ಹಾಸನ

ಬೇಲೂರಿನಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ

Published On :

ಬೇಲೂರು: ಛಾಯಾಗ್ರಾಹಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಬೇಕು ಎಂದು ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎ.ರಾಘವೇಂದ್ರ ಹೊಳ್ಳ ಒತ್ತಾಯಿಸಿದರು.
 ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ಇಲ್ಲಿನ ಶ್ರೀ ಚನ್ನಕೇಶವಸ್ವಾಮಿ ದೇಗುಲದಲ್ಲಿ ತಾಲೂಕು ಛಾಯಾಗ್ರಾಹಕರ ಸಂಘದಿಂದ ವಿಶೇಷ ಪೂಜೆ ಹಾಗೂ ಸಿಹಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಜೀವನೋಪಾಯಕ್ಕಾಗಿ ಛಾಯಾವೃತ್ತಿ ಅವಲಂಬಿಸಿಕೊಂಡಿರುವ ಛಾಯಾಗ್ರಾಹಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಬೇಕಾಗಿದೆ ಎಂದು ಹೇಳಿದರು.
ಕಟ್ಟಡ ಕಾರ್ಮಿಕರು, ಹಮಾಲಿಗಳು ಇತರೆ ಶ್ರಮಿತ ವರ್ಗದವರನ್ನು ಸರ್ಕಾರ ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಿದೆ. ಬಹುತೇಕ ಮಧ್ಯಮವರ್ಗದವರೆ ಛಾಯಾಗ್ರಾಹಕ ವೃತ್ತಿಯಲ್ಲಿದ್ದು ಒಂದು ವೇಳೆ ತೀವ್ರ ಅನಾರೋಗ್ಯ ಅಥವಾ ಅಪಘಾತಕ್ಕೀಡಾದರೆ ಅಂಥವರ ನೋವಿಗೆ ಸ್ಪಂದಿಸಲು ಸರ್ಕಾರದಿಂದ ಯಾವುದೇ ಸಹಾನುಭೂತಿ ಇಲ್ಲವಾಗಿದೆ ಎಂದರು.
ಪ್ರಸ್ತುತ ದೇಶದ ಜನತೆ ಹಾಗೂ ಛಾಯಾಗ್ರಾಹಕರಿಗೆ ಒಳ್ಳೆಯದಾಗುವಂತೆ ದೇವರಲ್ಲಿ ಪ್ರಾರ್ಥಿಸಿ, ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಸಿಹಿ ವಿತರಿಸಲಾಗಿದೆ. ಅಲ್ಲದೆ ತಾಲೂಕು ಛಾಯಾಗ್ರಾಹಕರ ಸಂಘಕ್ಕೆ ನಿವೇಶನ ನೀಡಿದರೆ ಕಟ್ಟಡ ನಿರ್ಮಿಸಿಕೊಂಡು ಸಂಘದ ಕಾರ್ಯಚಟುವಟಿಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.