ಸಂತಮೇರಿ ಶಾಲೆ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
ಕನ್ನಡಪ್ರಭ ವಾರ್ತೆ, ಅರಸೀಕೆರೆ, ಆ. 20
ಪ್ರಾಥಮಿಕ ಶಾಲೆಗಳ ನಗರ ಕ್ಲಸ್ಟರ್ ಕ್ರೀಡಾಕೂಟದಲ್ಲಿ ಸಂತಮೇರಿ ಆಂಗ್ಲಶಾಲೆಯ ವಿದ್ಯಾರ್ಥಿಗಳು ಬಾಲಕರ ಮತ್ತು ಬಾಲಕಿಯರ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಾಲಿಬಾಲ್‌ನಲ್ಲಿ ತಮ್ಮದಾಗಿಸಿಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆ ಗೊಂಡಿದ್ದಾರೆ.
28 ಶಾಲೆಗಳಿಂದ 13 ಕ್ರೀಡೆಗಳು ನಡೆಯಬೇಕಿದೆ. ಪಟ್ಟಣದ ಜೇನುಕಲ್ ಕ್ರೀಡಾಂಗಣದಲ್ಲಿ ನಗರ ಕ್ಲಸ್ಟರ್
ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟಕ್ಕೆ ಶಿಕ್ಷಣ ಸಂಯೋಜನಾಧಿಕಾರಿ ಯೋಗೀಶ್ ಅಧಿಕೃತವಾಗಿ ಚಾಲನೆ ನೀಡಿ ಮಾತನಾಡಿದ ಅವರು ಕ್ರೀಡಾಕೂಟದಲ್ಲಿ ಗೆಲುವು ಹಾಗೂ ಸೋಲು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಪರಸ್ಪರರು ಪ್ರೀತಿ, ವಿಶ್ವಾಸವನ್ನು ಗಳಿಸಲು ಕ್ರೀಡೆಗಳು ನೆರವಾಗಬೇಕು. ಶೈಕ್ಷಣಿಕ ಚಟುವಟಿಕೆಗಳಲ್ಲಿ ಓದು ಹೇಗೆ ಮುಖ್ಯವೋ ಆಟೋಟ ಚಟುವಟಿಕೆಗಳು ಕೂಡ ಅಷ್ಟೇ ಮುಖ್ಯ. ಭಾಗವಹಿಸಿರುವ ಶಾಲಾ ತಂಡಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಂತೆ ಕಿವಿಮಾತು ಹೇಳಿದರು.
ಪುರಸಭಾ ಸದಸ್ಯೆ ಅನ್ನಪೂರ್ಣ ಸತೀಶ್ ಕ್ರೀಡಾಜ್ಯೋತಿ ಸ್ವೀಕರಿಸಿ ಕ್ರೀಡಾಪಟುಗಳಿಗೆ ಶುಭಕೋರಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ತಿಮ್ಮೇಶ್ ಕ್ರೀಡೆಡೆಯಲ್ಲಿ ಗೆಲುವು ಸೋಲು ಸಾಮಾನ್ಯ ಆದರೆ ಪಾಲ್ಗೊಳ್ಳುವುದು ಮುಖ್ಯ ಎಂದ ಅವರು ಆತ್ಮರ್ಸ್ಥೈರ್ಯದಿಂದ ಪಾಲ್ಗೊಳ್ಳಿರಿ ಎಂದು ತಿಳಿಸಿದರು.
ಮುಖ್ಯ ಅಥಿತಿಯಾಗಿ ಪಾಲ್ಗೊಂಡಿದ್ದ ಪುರಸಭಾ ಸದಸ್ಯ ಮೋಹನ್, ಸುರೇಶ್ ಅವರುಗಳು ಕ್ರೀಡಾಪಟುಗಳಿಗೆ ಶುಭ ಕೋರಿದರು. ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸಿ.ಆರ್.ಪಿ.ಶೇಖರ್ ಸಿ.ಆರ್.ಪಿ.ಕ್ಯಾತಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

