ಕಮಿಷನ್ ಹೆಚ್ಚಳಕ್ಕೆ ನ್ಯಾಯಬೆಲೆ ಅಂಗಡಿ ಮಾಲೀಕರ ಮನವಿ
ಅರಸೀಕೆರೆ: ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೀಡುತ್ತಿರುವ ಕಮಿಷನ್ ತೀರಾ ಕಡಿಮೆಯಾಗಿದ್ದು. ಇದು ಮುಂದುವರಿದರೆ ಅಂಗಡಿಗಳನ್ನು ಮುಂದುವರಿಸಲು ಕಷ್ಟಕರ. ಸರ್ಕಾರ ಈ ಬಗ್ಗೆ ಗಮನ ಹರಿಸಿ ಕಮಿಷನ್ ಹೆಚ್ಚಿಸಬೇಕೆಂದು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ ಸರ್ಕಾರವನ್ನು ಆಗ್ರಹಿಸಿದ್ದಾರೆ. ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಆಗುತ್ತಿರುವ ಕಷ್ಟ ನಷ್ಟ ಹಾಗೂ ಕಿರುಕುಳದ ಬಗ್ಗೆ ತಾಲೂಕು ಪದಾಧಿಕಾರಿಗಳ ಜತೆ ಚರ್ಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪ್ರಸ್ತುತ ಪ್ರತಿ ಕ್ವಿಂಟಾಲ್ ಅಕ್ಕಿಗೆ 31 ರು., ಗೋಧಿಗೆ 25 ರು., ಸಕ್ಕರೆಗೆ 13 ರು. ಹಾಗೂ ಸೀಮೆಎಣ್ಣೆ ಪ್ರತಿ ಲೀಟರ್ಗೆ 50 ಪೈಸೆ ಕಮಿಷನ್ ನೀಡುತ್ತಿರುವುದು ಅವೈಜ್ಞಾನಿಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಿ ವಿತರಕರ ಸಂಘ ಪ್ರತಿ ಕ್ವಿಂಟಲ್ ಅಕ್ಕಿ, ಗೋಧಿಗೆ 50 ರು., ಸೀಮೆಎಣ್ಣೆಗೆ 1 ರು., ಸಕ್ಕರೆಗೆ 100 ರು., ಕಮಿಷನ್ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿದ ಸರ್ಕಾರದ ಕಾರ್ಯದರ್ಶಿಗಳು ವಿಧಾನಸಭಾ ಚುನಾವಣೆ ಮುಗಿದ ನಂತರ ಸಮಸ್ಯೆ ಪರಿಹರಿಸುವ ಆಶ್ವಾಸನೆ ನೀಡಿದ್ದರು. ಸರ್ಕಾರ ಅಸ್ಥಿತ್ವಕ್ಕೆ ಬಂದು 100 ದಿನಗಳು ಕಳೆದರೂ ಸಮಸ್ಯೆ ಬಗೆಹರಿಯುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಸರ್ಕಾರ ಶೀಘ್ರವೇ ತೀರ್ಮಾನ ಪ್ರಕಟಿಸದಿದ್ದರೆ ಸೆಪ್ಟೆಂಬರ್ನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು. ತಾಲೂಕು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘಧ ಅಧ್ಯಕ್ಷ ನಾಗರಾಜ್, ಲೋಕೇಶ್, ಶಿವಶಂಕರ್, ಸುನೀಲ್, ಬಿ.ಎಸ್.ದೇವೇಗೌಡ, ಪ್ರಭಾಕರ್, ಮಲ್ಲಿಕಾರ್ಜುನ್, ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

