ಜೀತಪದ್ಧತಿಯ ಮಿಥ್ಯ ಸಮೀಕ್ಷೆ ನೀಡಿದರೆ ರಾಜ್ಯಾದ್ಯಂತ ಪ್ರತಿಭಟನೆ; ಜೀವಿಕ ಎಚ್ಚರಿಕೆ
ಕ.ಪ್ರ.ವಾರ್ತೆ , ಹಾಸನ , ಆ 21
ಜೀತಪದ್ಧತಿ ರದ್ಧತಿ ಕಾಯ್ದೆ 1976 ರ ಬಗ್ಗೆ ಅಧಿಕಾರಿಗಳು ಸರಿಯಾಗಿ ಅರ್ಥೈಸದೇ ಜೀತಪದ್ಧತಿಯ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆ ಸುಳ್ಳಾಗಿ ನೀಡಿದರೆ ಅದರ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುವುದಾಗಿ ಜೀತ ವಿಮುಕ್ತ ಕರ್ನಾಟಕ (ಜೀವಿಕ) ಸಂಘಟನೆ ಎಚ್ಚರಿಕೆ ನೀಡಿದೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೀವಿಕ ರಾಜ್ಯ ಸಂಚಾಲಕ ಉಮೇಶ್, ಅಧಿಕಾರಿಗಳು ಜೀತ ಪದ್ಧತಿಯ ರದ್ಧತಿ ಕಾಯ್ದೆಯನ್ನು ಸರಿಯಾಗಿ ತಿಳಿಯದೇ ಸಮೀಕ್ಷೆ ನಡೆಸುತ್ತಿದ್ದು, 1976ರಿಂದ ಜೀತ ಪದ್ಧತಿಯು ಸಂಪೂರ್ಣವಾಗಿ ರದ್ಧಾಗಿದೆ ಎಂದು ಸರ್ಕಾರಗಳು ಹೇಳಿಕೊಂಡು ಬರುತ್ತಿವೆ. ಆದರೆ ರಾಜ್ಯದ ಪ್ರತಿ ಗ್ರಾಮದಲ್ಲಿ ಜೀತ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ವಿಷಾದಿಸಿದರು.
ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ರಾಗಿಮರೂರು ಗ್ರಾಮದಲ್ಲಿ 40 ಕ್ಕೂ ಹೆಚ್ಚು ಮಂದಿ ಜೀತದಾಳಾಗಿ ದುಡಿಯುತ್ತಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಂಬಂಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಗ್ರಾಮದಲ್ಲಿ ದಿನದ ಕೂಲಿ 174 ರು. ಬದಲಿಗೆ ಕಡಿಮೆ ವೇತನ ನೀಡಲಾಗುತ್ತಿದೆ. ಈ ಬಗ್ಗೆ ವಾಸ್ತವತೆಯನ್ನು ಅಧಿಕಾರಿಗಳು ಅರಿತಿದ್ದಾರೆ.
ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪ್ರಾಮಾಣಿಕವಾಗಿ ಹಾಗೂ ಸರಿಯಾಗಿ ಸಮೀಕ್ಷೆಯನ್ನು ನಡೆಸಿ ವರದಿಯನ್ನು ನೀಡಬೇಕು. ಇಲ್ಲವಾದಲ್ಲಿ ಈ ವಿರುದ್ಧ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜೀವಿಕ ಸಂಘಟನೆಯ ಜಿಲ್ಲಾ ಸಂಚಾಲಕರಾದ ಬಸವರಾಜ್, ಭೈರಪ್ಪ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

