ಹಾಸನ

'ಮಹಾತ್ಮರ ತ್ಯಾಗ ಬಲಿದಾನ ಸ್ಮರಿಸಿ'

Published On :

ಹಾಸನ: ಸ್ವಾತಂತ್ರ್ಯಗಳಿಸುವ ಸಲುವಾಗಿ ಲಕ್ಷಾಂತರ ಮಹಾತ್ಮರು ತ್ಯಾಗ ಬಲಿದಾನ ಮಾಡಿದ್ದು ಅವರನ್ನು ಪ್ರತಿಯೊಬ್ಬರು ಸ್ಮರಿಸಬೇಕು ಎಂದು  ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ ತಿಳಿಸಿದರು.
ನಗರದ ಸ್ಪಂದನ ಫೌಂಡೇಶನ್  ಏರ್ಪಡಿಸಿದ್ದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಧ್ವಜಾ ರೋಹಣ ನೆರವೇರಿಸಿ ಅವರು ಮಾತನಾಡಿದರು.ನವದೆಹಲಿಯ ಕೆಂಪುಕೋಟೆಯಲ್ಲಿ ಸಾವಿರಾರು ಪೊಲೀಸ್ ಭದ್ರತೆಯಲ್ಲಿ  ಸ್ವಾತಂತ್ಯೋತ್ಸವ ಆಚರಿಸುತ್ತಿರುವುದು ದುರಾದೃಷ್ಟಕರ ಎಂದು ಹೇಳಿದರು.
ಭಯೋತ್ಪಾದನೆ ನಮ್ಮ ದೇಶಕ್ಕೆ ಒಂದು ಶಾಪವಾಗಿದ್ದು ಇದನ್ನು ಸಂಪೂರ್ಣವಾಗಿ ಮಟ್ಟ ಹಾಕದಿದ್ದರೆ ಭಾರತವು ಅಭಿವೃದ್ಧಿಯಲ್ಲಿ ಹಿಂದೆ ಬೀಳುವುದೆಂದು ಹೇಳಿದರು.
ಪರಿಸರವಾದಿ  ಹಾಗೂ ಎಚ್‌ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಚ್.ಪಿ. ಮೋಹನ್, ನಗರಸಭಾ ಮಾಜಿ ಅಧ್ಯಕ್ಷ ಚನ್ನವೀರಪ್ಪ, ಅಳತೆ ಮತ್ತು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಜಿ.ಎನ್.ನರಸಿಂಹಮೂರ್ತಿ ಮತ್ತು ನಗರಸಭಾ ಸದಸ್ಯ ಎಚ್.ಆರ್. ಪ್ರಸನ್ನ ಕುಮಾರ್, ಗೋಪಾಲ್ ಮಾತ ನಾಡಿದರು.
ಸ್ಪಂದನ ಪೌಂಡೇಷನ್‌ನ ಚಿನ್ನ ಬೆಳ್ಳಿ ವರ್ತಕ ಪ್ರಮೋದ್,ಮುನ್ನಾವರ್ ಪಾಷ, ಅಹಮ್ಮದ್ ಜಾನ್, ನವೀನ್ ಕುಮಾರ್, ಸುನೀಲ್ ಕುಮಾರ್, ದಿನೇಶ್,ಶಾಯಿನ್‌ಷಾ, ಜಯಂತ್ ಇದ್ದರು. ಕಾರ್ಯಕ್ರಮದ ಅಂಗವಾಗಿ  ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ಬ್ಯಾಗ್‌ಗಳನ್ನು ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.