ಉತ್ತಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಬಹು ಮುಖ್ಯ: ಶಾಸಕ ಶಿವಲಿಂಗೇಗೌಡ
ಅರಸೀಕೆರೆ: ಉತ್ತಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮುಖ್ಯವಾಗಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಗುರುಭವನದಲ್ಲಿ ಇತ್ತೀಚೆಗೆ ನಡೆದ ಪತ್ರಿಕೆಯೊಂದರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಶಾಸಕರು, ಪತ್ರಿಕಾ ಮಾಧ್ಯಮ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಾಗರಿಕರ ಆಶೋತ್ತರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವ ಕಾರಣ ಸಾರ್ವಜನಿಕ ವಲಯದಲ್ಲಿ ಪತ್ರಿಕೆಗಳಿಗೆ ವಿಶೇಷ ಸ್ಥಾನಮಾನ ಲಭಿಸಿದೆ ಎಂದು ಹೇಳಿದರು.
ಪ್ರಸ್ತುತ ಪತ್ರಿಕಾ ರಂಗದ ಜೊತೆಗೆ ಚಾನಲ್ಗಳ ಸಂಖ್ಯೆ ಕೂಡ ಬೆಳೆಯುತ್ತಿದ್ದು, ಬ್ರೇಕಿಂಗ್ ನ್ಯೂಸ್ ನೀಡಬೇಕೆಂಬ ಆತುರದಲ್ಲಿ ಸತ್ಯಾಸತ್ಯತೆಯನ್ನು ತಿಳಿಯುವ ವ್ಯವದಾನ ಇಲ್ಲದ ಕೆಲ ಚಾನಲ್ಗಳು ಅನೇಕ ಜಟಿಲ ಸಮಸ್ಯೆಗಳನ್ನು ಉಂಟುಮಾಡಿ ವ್ಯಯುಕ್ತಿಕ ಬದುಕನ್ನು ಸಾರ್ವತ್ರಿಕ ಪ್ರದರ್ಶನಕ್ಕೆ ಬಳಸಿಕೊಳ್ಳುವ ಮೂಲಕ ಕೌಟುಂಬಿಕ ಸಮಸ್ಯೆಗಳನ್ನು ವಿಪರೀತಕ್ಕೆ ತಂದ ನಿದರ್ಶನಗಳನ್ನು ಅವರು ಪ್ರಸ್ತಾಪಿಸಿ ವಿಷಾದ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಲೀಲಾವತಿ, ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯ ಉದಯಕುಮಾರ್ ಮಾತನಾಡಿದರು.
ಕ್ರೇಜಿ ವಾಯ್ಸ್ ಪತ್ರಿಕೆ ಸಂಪಾದಕ ಬೋರೇಹಳ್ಳಿ ವೆಂಕಟೇಶ್, ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ, ಬಿಇಓ ಎಸ್.ಪಿ.ನಟರಾಜು, ಎಪಿಎಂಸಿ ಅಧ್ಯಕ್ಷ ಮುರುಂಡಿ ಶಿವಲಿಂಗಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸೋಮಶೇಖರ್, ತೆಂಗುನಾರು ಅಭಿವೃದ್ಧಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ಎಂ.ಸಮೀವುಲ್ಲ, ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

