ಎಸ್ಬಿಐನಿಂದ ರೈತರ ಸಾಲ ನವೀಕರಣ ಶಿಬಿರ
ಕ.ಪ್ರ.ವಾರ್ತೆ ಚನ್ನರಾಯಪಟ್ಟಣ ಆ.22
ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ತಾಲೂಕಿನಲ್ಲಿ 7 ಕೋಟಿ ಕೃಷಿ ಸಾಲವನ್ನು ಕಳೆದ ಸಾಲಿನಲ್ಲಿ ನೀಡಲಾಗಿದೆ ಎಂದು ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕ ನಿರ್ದೇಶಕ ಜಿ.ಜಿ ಪ್ರಸಾದ್ ತಿಳಿಸಿದರು.
ತಾಲೂಕಿನ ಸಾತೇನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ರೈತರ ಸಾಲ ನವೀಕರಣ ಶಿಬಿರದಲ್ಲಿ ಮಾತನಾಡಿ, ತಾಲೂಕಿನಲ್ಲಿ ಬರಗಾಲವಿರುವ ಕಾರಣ ಬ್ಯಾಂಕ್ನಲ್ಲಿ ಸಾಲೆ ತೆಗೆದುಕೊಂಡಿರುವ ರೈತರು ಸಾಲ ತೀರುವಳಿ ಮಾಡಲು ಸಾಧ್ಯವಾಗದವರಿಂದ ಸಾಲದ ಮೇಲಿನ ಬಡ್ಡಿಯನ್ನು ಮಾತ್ರ ತೆಗೆದುಕೊಂಡು ನವೀಕರಿಸಲಾಗುತ್ತಿದೆ ಎಂದು ತಿಳಿಸಿದರು. ಸಾಲ ತೆಗೆದುಕೊಂಡ ರೈತ ತಾನು ಸಾಲದ ಮೇಲೆ ಶೇ.4ರಷ್ಟು ಬಡ್ಡಿ ಕಟ್ಟಿ ಪ್ರತಿವರ್ಷ ನವೀಕರಿಸಬಹುದಾಗಿದೆ ಎಂದು ತಿಳಿಸಿದರು.
ಚನ್ನರಾಯಪಟ್ಟಣ ಬ್ಯಾಂಕ್ ವ್ಯವಸ್ಥಾಪಕ ಸೋಮಶೇಖರಪ್ಪ, ಬಿ.ಎಂ ಶೀಲಾ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ, ಮಾಜಿ ಅಧ್ಯಕ್ಷ ಶಿವಲಿಂಗೇಗೌಡ ಇದ್ದರು.
ಪ್ರತಿಭಾ ಪುರಸ್ಕಾರ
ಹಾಸನ: ಜಿಲ್ಲಾ ದೇವಾಂಗ ನೌಕರರ ಸಂಫದ ವತಿಯಿಂದ ಜಿಲ್ಲೆಯ ಪ್ರಸಕ್ತ ಸಾಲಿನಲ್ಲಿ ದೇವಾಂಗ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ 2013ರ ಸೆಪ್ಟೆಂಬರ್ 15ರಂದು ಏರ್ಪಡಿಸಲಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ಶೇ. 80ಕ್ಕಿಂತ, ದ್ವಿತೀಯ ಪಿಯುಸಿಯಲ್ಲಿ ಶೇ.75ಕ್ಕಿಂತ ಹಾಗೂ ಪದವಿಯಲ್ಲಿ ಶೇ.70ಕ್ಕೂ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಅಂಕಪಟ್ಟಿ, ಜಾತಿ ದೃಢೀಕರಣ ಪತ್ರದೊಂದಿಗೆ ಅರ್ಜಿಯನ್ನು ಸೆ. 2 ರೊಳಗೆ ಜಿಲ್ಲಾ ಅಥವಾ ತಾಲೂಕು ನೌಕರರ ಸಂಘದ ಅಧ್ಯಕ್ಷರಿಗೆ ಸಲ್ಲಿಸಬೇಕೆಂದು ಕೋರಲಾಗಿದೆ. ಇದೇ ಸಂದರ್ಭದಲ್ಲಿ ನಿವೃತ್ತ ದೇವಾಂಗ ನೌಕರರು ಹಾಗೂ ಸ್ಥಳೀಯ ಸಂಸ್ಥೆ ಚುನಾಯಿತ ದೇವಾಂಗ ಜನಾಂಗದ ಪ್ರತಿನಿಧಿಗಳಿಗೂ ಸನ್ಮಾನ ಹಮ್ಮಿಕೊಳ್ಳಲಾಗಿದ್ದು, ತಮ್ಮ ಸ್ವವಿವರ ಸಲ್ಲಿಸಬೇಕೆಂದು ಕೋರಲಾಗಿದೆ. ಬಿ. ಸೋಮಶೇಖರ್, ಮೊ. 9483811363 ಸಂಪರ್ಕಿಸಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

