ಅರಣ್ಯ ಇಲಾಖೆ ದಿನಗೂಲಿ ನೌಕರರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ , ಹಾಸನ , ಆ. 23
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅರಣ್ಯ ಇಲಾಖೆಯ ದಿನಗೂಲಿ ನೌಕರರ ಕೈಗೊಂಡಿರುವ ಅನಿದಿರ್ಷ್ಟಾವಧಿ ಪ್ರತಿಭಟನೆ ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಿರತ ನೌಕರರು ಇಲಾಖೆಯ ಮುಂದೆ ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರತಿಕೃತಿ ದಹಿಸಿ ಪ್ರತಿಭಟನೆ ಮುಂದುವರೆಸಿದರು.
ಹಾಸನ ವೃತ್ತದ ತುಮಕೂರು ವಿಭಾಗದ ಕುಣಿಗಲ್, ಗುಬ್ಬಿ, ಹಾಸನ ವಿಭಾಗದ ಅರಕಲಗೂಡು, ಹೊಳೆನರಸೀಪುರ, ಸಕಲೇಶಪುರ ವಲಯಗಳಲ್ಲಿ ದಿನಗೂಲಿ ಮತ್ತು ಪಿಸಿಪಿ ನೌಕರರಿಗೆ ಕಡಿಮೆ ಸಂಬಳ ನೀಡುವ ಮೂಲಕ ಸರ್ಕಾರಿ ಆದೇಶಗಳನ್ನು ಸಂಪೂರ್ಣವಾಗಿ ಉಲ್ಲಂಘನೆ, ಘನ ನ್ಯಾಯಾಲಯಗಳ ತೀರ್ಪನ್ನು ಉಲ್ಲಂಘಿಸಿರುವುದನ್ನು ವಿರೋಧಿಸಿದರು.
ಹಾಸನ ವಿಭಾಗದ ಅರಕಲಗೂಡು, ಹೊಳೆನರಸೀಪುರ, ಬೇಲೂರು, ಹಳೆಬೀಡು ವಲಯಗಳಲ್ಲಿ ಕಳೆದ 10 ವರ್ಷಗಳಿಂದಲೂ ಕೆಲಸ ನಿರ್ವಹಿಸುತ್ತಿರುವ ಪಿಸಿಪಿ ನೌಕರರಿಗೆ ಬ್ಯಾಂಕ್ ಮೂಲಕ ಸಂಬಳ ನೀಡಲಾಗುತ್ತಿಲ್ಲ. ಹೊಳೆನರಸೀಪುರ ವಲಯದಲ್ಲಿ ಪ್ರತಿ ನೌಕರನಿಗೆ 2 ಸಾವಿರ ರು., ಅರಕಲಗೂಡು ವಲಯದಲ್ಲಿ 3 ಸಾವಿರ ರು. ವೇತನ ನೀಡಲಾಗುತ್ತಿದ್ದು, ವೆಚ್ಚು ವೇತನ ನೀಡುತ್ತಿರುವುದಾಗಿ ಸುಳ್ಳು ಮಾಹಿತಿ ನೀಡಿ ದಿನಗೂಲಿ ನೌಕರರನ್ನು ವಂಚಿಸಲಾಗುತ್ತಿದೆ.
ಕೂಡಲೇ ಈ ಪದ್ಧತಿಯನ್ನು ನಿಲ್ಲಿಸಿ ಎಲ್ಲಾ ನೌಕರರಿಗೂ ಸಮಾನ ವೇತನ ನೀಡುವಂತೆ ಒತ್ತಾಯಿಸಿದ ಅವರು, ತುಮಕೂರು ವಿಭಾಗದ ಕುಣಿಗಲ್, ಹುಲಿಯೂರುದುರ್ಗಾ, ಗುಬ್ಬಿ ವಲಯಗಳಲ್ಲಿ ವೇತನ ತಾರತಮ್ಯವಿದ್ದು, ಇದನ್ನು ಸರಿಪಡಿಸುವಂತೆ ಪಟ್ಟು ಹಿಡಿದರು.
ಪ್ರತಿಭಟನೆಯಲ್ಲಿ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಗಳ ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹೇಮರಾಜ್, ಹುಣಸುರು ಘಟಕದ ಅಧ್ಯಕ್ಷ ರಾಜಶೇಖರ್, ಪ್ರಕಾಶ್, ಬಸವರಾಜ್, ಕೃಷ್ಣಮೂರ್ತಿ ಬೋರೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

