ಹಾಸನ

ಜಿಲ್ಲಾದ್ಯಂತ ಕಾಂಗ್ರೆಸ್ ವಿಜಯೋತ್ಸವ

Published On :

ಕ.ಪ್ರ. ವಾರ್ತೆ ಹಾಸನ ಆ. 24
ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
 ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹಾಗೂ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮ್ಯ ಅವರು ಅತೀ ಹೆಚ್ಚಿನ ಮತಗಳ ಅಂತರದಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ತಕಾರ್ಯಕರ್ತರು ತಮ್ಮ ಕಚೇರಿ ಮುಂದೆ ಪಟಾಕಿ ಸಿಡಿಸಿದರು. ನಂತರ ಸಿಹಿ ಹಂಚಿ ಸಂಭ್ರಮಿಸಿ ಕಾಂಗ್ರೆಸ್‌ಗೆ  ಜಯವಾಗಲಿ ಎಂಬ ಘೋಷಣೆ ಕೂಗಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣಗೌಡ, ಮುಖಂಡ ಗೋಪಾಲಸ್ವಾಮಿ, ಜುಲ್ಫಿಕರ್ ಅಲಿ ಇತರರು ಇದ್ದರು.
ಸಕಲೇಶಪುರ: ತಾಲೂಕಿನಲ್ಲಿ ದಶಕದಿಂದ ನಾಯಕರ ನಡುವಿನ ಸ್ವಪ್ರತಿಷ್ಠೆಯಿಂದ ಸೊರಗಿರುವ ಸ್ಥಳೀಯ ಕಾಂಗ್ರೆಸ್ ಸುಧಾರಣೆ ಅಸಾಧ್ಯವಾಗಿದೆ. ಶನಿವಾರ ಪಟ್ಟಣದಲ್ಲಿ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯ ವಿಜಯೋತ್ಸವದಲ್ಲೂ ಭಿನ್ನಮತ ಮತ್ತೊಮ್ಮೆ ಬಹಿರಂಗವಾಗಿ ಗೋಚರಿಸಿದೆ.
ಪಟ್ಟಣದ ಹಳೇ ಬಸ್ ನಿಲ್ದಾಣ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊದಲಿಗೆ ಕೆಪಿಸಿಸಿ ಸದಸ್ಯ ವೈ.ಪಿ.ರಾಜೇಗೌಡ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಕೌಡಳ್ಳಿಲೋಹಿತ್ ನೇತೃತ್ವದ ತಂಡ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಇದೇ ಸ್ಥಳಕ್ಕಾಗಮಿಸಿದ ಜಿಪಂ ಮಾಜಿ ಸದಸ್ಯ ಸಣ್ಣಸ್ವಾಮಿ ತಂಡ ಮತ್ತೆ ಪಟಾಕಿ ಸಡಿಸಿ ಸಹಿ ಹಂಚಿ ಸಂಭ್ರಮಿಸಿತು.

ಚನ್ನರಾಯಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂತಸ
ಚನ್ನರಾಯಪಟ್ಟಣ: ರಾಜ್ಯದಲ್ಲಿ ಎರಡು ಲೋಕಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು.
ಎರಡೂ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಕೆ.ಆರ್ ಸರ್ಕಲ್‌ನಲ್ಲಿ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೈಕಾರ ಕೂಗುವ ಮುಖೇನ ಪರಸ್ಪರ ಸಿಹಿ ಹಂಚಿ ಪಟಾಕಿ ಸಿಡಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು.  
ಸಿದ್ದರಾಮಯ್ಯ ಅವರ ಸರ್ಕಾರ ಬಡವರ ಪರವಾಗಿದ್ದು, ಅವರ ವಿವಿದ ಯೋಜನೆಗಳ ಫಲವಾಗಿ ಎರಡೂ ಕ್ಷೇತ್ರಗಳಲ್ಲಿ ವಿಜಯಿಯಾಗಿದ್ದು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ಗೆಲುವು ಖಚಿತ ಎಂದು ಘೋಷಣೆ ಕೂಗಿದರು.
ಜೆಡಿಎಸ್ - ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಂಡರೂ ಜನತೆ ಅವರ ಜತೆ ಕೈ ಜೋಡಿಸಿಲ್ಲ. ಅವರ ಕಾಲಕ್ಕೆ ತಕ್ಕ ಆಟವನ್ನು ಜನತೆ ತುಂಬಾ ಕಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಜು ತಿಳಿಸಿದರು.

ಆಲೂರಿನಲ್ಲೂ ಕಾಂಗ್ರೆಸ್ ಸಂಭ್ರಮ
ಆಲೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಗಳನ್ನು ಮೆಚ್ಚಿ ಜನತೆ ಆಶೀರ್ವಾದ ಮಾಡಿದ್ದು ಕಾಂಗ್ರೆಸ್ ಗೆಲವು ಅದನ್ನು ಸಾಬೀತು ಮಾಡಿದೆ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಆರ್.ರಂಗನಾಥ್ ಹೇಳಿದರು.
ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಗಳಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕಾಂಗ್ರೆಸ್ ಅಲೆಯಿದೆ. ಮುಖ್ಯಮಂತ್ರಿಯವರ ನೇರ, ಪಾರದರ್ಶಕ ಆಡಳಿತ ಹಾಗೂ ಕಾಂಗ್ರೆಸ್‌ನ ಜನಪರ ನಿಲುವು, ಕಾರ್ಯಕರ್ತರ ಪರಿಶ್ರಮ ಮತ್ತು ಮತದಾರರ ಆಶೀರ್ವಾದ ಪಕ್ಷದ ಗೆಲುವಿಗೆ ಕಾರಣವಾಗಿದೆಯೆಂದರು. ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಕೆ.ಲಿಂಗರಾಜ್, ಎಚ್.ವಿ.ಶಿವರಾಮೆಗೌಡ, ಮಹಮದ್ ಇಸಾಖ್, ರಂಗಯ್ಯ, ಟಿಎಪಿಸಿಎಂಎಸ್ ಅಧ್ಯಕ್ಷ ರಂಗೇಗೌಡ, ರೇವೆಗೌಡ, ಎಚ್.ಸಿ.ಶಾಂತಕೃಷ್ಣ, ಖಾಲಿದ್ ಪಾಷಾ, ವೈ.ಬಿ.ಟೀಕರಾಜ್, ಜಿಪಂ ಮಾಜಿ ಸದಸ್ಯ ಸುಬ್ಬಶೆಟ್ಟಿ, ಸಂದೇಶ್,ತೌಫಿಕ್, ಇಲ್ಯಾಸ್, ಸುಹಿಲ್, ಚೆಲುವರಾಯಗೌಡ, ಎಂ.ಎಚ್.ರಂಗೇಗೌಡ, ರಂಗಯ್ಯಕಾಂತರಾಜ್, ಬಿ.ಎಚ್.ಧರ್ಮಪ್ಪ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.