ಹಾಸನ

ನಮೋ ಬ್ರಿಗೇಡ್ ಕಾರ್ಯಕರ್ತರ ಬೈಕ್ ರ್ಯಾಲಿ

Published On :

ಹಾಸನ: ದೇಶದ ಆದರ್ಶ ವ್ಯಕ್ತಿಗಳಲ್ಲಿ ಒಬ್ಬರಾದ ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಆದರ್ಶ ಭಾರತದ ನಿರ್ಮಾಣಕ್ಕಾಗಿ ಅವರನ್ನು ಬೆಂಬಲಿಸಿ ನಮೋ ಬ್ರಿಗೇಡ್ ಸಂಘಟನೆ ರಾಷ್ಟ್ರಾದ್ಯಂತ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ನಮೋ ಬ್ರೀಗೆಡ್ ಅಭಿಮಾನಿಗಳು ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಮಾಡುವ ಮೂಲಕ ಮೋದಿಗೆ ಬೆಂಬಲ ನೀಡಬೇಕೆಂದು ಪ್ರಚಾರ ನಡೆಸಿದರು. ನಗರದ ಹೇಮಾವತಿ ಪ್ರತಿಮೆಯಿಂದ ಬೈಕ್ ರ್ಯಾಲಿ ಪ್ರಾರಂಭಿಸಿದರು. ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ನಮೋ ಬ್ರಿಗೇಡ್ ಉದ್ಘಾಟನೆಗೊಳ್ಳಲಿದೆ. ನಮೋ ಬ್ರಿಗೇಡ್ ಪ್ರಮುಖ ರರ್ಷಿತ್, ಚಂದನ್, ಶಿವಕುಮಾರ್, ಶರತ್ ಇತರರು ಇದ್ದರು.

ನಾಳೆ ವಿದ್ಯುತ್ ವ್ಯತ್ಯಯ
ಹಾಸನ: ವಿದ್ಯುತ್ ನಿಗಮದಿಂದ ಆ.24 ರಂದು ಹಮ್ಮಿಕೊಳ್ಳಲಾಗಿದ್ದ 66ಕೆವಿ ಹಾಸನ-ಸಕಲೇಶಪುರ ವಿದ್ಯುತ್
ಪ್ರಸರಣ ಮಾರ್ಗದ ನಿರ್ವಹಣಾ ಕಾಮಗಾರಿಯನ್ನು ಕಾರಣಾಂತರಗಳಿಂದ ಆ.26ಕ್ಕೆ ಮುಂದೂಡಲಾಗಿದೆ.
ಅಂದು ಮಗ್ಗೆ, ಬಾಳ್ಳುಪೇಟೆ, ಸಕಲೇಶಪುರ, ಹಾನುಬಾಳು ಮತ್ತು ಅರೇಹಳ್ಳಿ ಸುತ್ತಮುತ್ತಲ ಗ್ರಾಮಗಳಿಗೆ ಬೆಳಗ್ಗೆ 10 ರಿಂದ  ಸಂಜೆ  4 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕವಿಪ್ರನಿನಿ ಪ್ರಸರಣ ಮಾರ್ಗಗಳ ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.