ವಿಶ್ವದಾದ್ಯಂತ ಹೆಚ್ಚು ಪ್ರಸಿದ್ಧಿ ಪಡೆದ ಸಾಮಾಜಿಕ ಜಾಲ ತಾಣ'
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ಆ.24
ವಿಶ್ವದಾದ್ಯಂತ ಸಾಮಾಜಿಕ ಜಾಲ ತಾಣಗಳು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿವೆ ಎಂದು ಹುಣಸೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಎನ್.ಕರುಣಾಕರ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ವಿಭಾಗದ ವತಿಯಿಂದ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲ ತಾಣಗಳು ಎಂಬ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು.
ಇಂದು ಸಾಮಾಜಿಕ ಜಾಲ ತಾಣಗಳು ಕೆಲವೊಂದು ಸೀಮಿತ ವರ್ಗಕ್ಕೆ ಮೀಸಲಾಗದೆ, ಪ್ರತಿಯೊಬ್ಬರೂ ತಮ್ಮ ಅನಿಸಿಕೆಗಳು, ಫೋಟೋಗಳು ಮುಂತಾದವುಗಳನ್ನು ಹಾಕಿ ಸ್ನೇಹಿತರೊಂದಿಗೆ ಅಭಿಪ್ರಾಯ ಹಂಚಿಕೊಳ್ಳುವ ವ್ಯವಸ್ಥೆಯ ಬಗ್ಗೆ ತಿಳಿಸಿ, ಅದರ ಉಪಯೋಗ ಮತ್ತು ದುರುಪಯೋಗ ಕುರಿತಂತೆಯೂ ಮಾತನಾಡಿದರು.
ಗ್ರಂಥಪಾಲಕ ಎಚ್.ಶ್ರೀನಿವಾಸ್ ಮಾತನಾಡಿ, ನಗರ ಪ್ರದೇಶಗಳಲ್ಲಿನ ಗ್ರಂಥಾಲಯಗಳಂತೆ, ಸರ್ಕಾರ ಕಾಲೇಜುಗಳಲ್ಲಿನ ಗ್ರಂಥಾಲಯದಲ್ಲೂ ಬದಲಾವಣೆಗಳನ್ನು ತಂದಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೂ ಮಾಹಿತಿ ತಂತ್ರಜ್ಞಾನದ ತಿಳಿವಳಿಕೆ ಕೊಡಬೇಕೆನ್ನುವ ಉದ್ದೇಶದಿಂದ ಪ್ರತಿ ವರ್ಷವೂ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಬಿ.ಸಿ.ಮಲ್ಲೇಶ್ ಅಧ್ಯಕ್ಷತೆ ವಹಿಸಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ನಯನತಾರಾಮಣಿ, ನಿವೃತ್ತ ಮುಖ್ಯೋಪಾಧ್ಯಾಯ ವೀರಭದ್ರಪ್ಪ ಇದ್ದರು. ಮಧುಸೂದನ್ ಸ್ವಾಗತಿಸಿದರು. ಗ್ರಂಥಪಾಲಕ ಎಂ.ಸಿ.ಕುಮಾರಸ್ವಾಮಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

