ಹಾಸನ

ಕ್ರೀಡಾಂಗಣ ಕಾಮಗಾರಿ ಶೀಘ್ರ ಪೂರ್ಣ: ಜಿಪಂ ಸದಸ್ಯ ಚಂದ್ರೇಗೌಡ ಭರವಸೆ

Published On :

ಬೇಲೂರು: ಪಟ್ಟಣದಲ್ಲಿ ಆಮೆಗತಿಯಲ್ಲಿ ಸಾಗುತ್ತಿರುವ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಕುರಿತು ಸಂಬಂಧಪಟ್ಟ ಎಂಜಿನಿಯರ್ ಅವರನ್ನ ಸಂಪರ್ಕಿಸಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ಕುರಿತು ಗಮನ ಹರಿಸುವುದಾಗಿ ಜಿಪಂ ಸದಸ್ಯ ಬಿ.ಡಿ.ಚಂದ್ರೇಗೌಡ ಭರವಸೆ ನೀಡಿದರು.
 ಸಾರ್ವಜನಿಕ ಶಿಕ್ಷಣ ಇಲಾಖೆ, ಹೊಯ್ಸಳ ಸಂಯುಕ್ತ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ   ಪಟ್ಟಣದ ಸರ್ಕಾರಿ   ಕಿರಿಯ ಕಾಲೇಜು ಮುಂಭಾಗದ ಮೈದಾನದಲ್ಲಿ  ಆಯೋಜಿಸಿರುವ ಪ್ರೌಢಶಾಲಾ ಎ.ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ  ಶುಕ್ರವಾರ ಕ್ರೀಡಾಜ್ಯೋತಿ ವಂದನೆ ಸ್ವೀಕರಿಸಿ ಮಾತನಾಡಿದರು.
 ಕ್ರೀಡಾಧ್ವಜಾರೋಹಣ ನೆರವೇರಿಸಿದ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಲೋಕೇಗೌಡ ಮಾತನಾಡಿ, ಪಟ್ಟಣದ ಮಾಧ್ಯಮಿಕ ಆಟದ ಮೈದಾನದಲ್ಲಿ ಎಲ್ಲಾ ವಿದಧ ಕ್ರೀಡಾಕೂಟ ನಡೆಸಲಾಗುತ್ತಿದೆ. ರಾಷ್ಟ್ರೀಯ ಹಬ್ಬಗಳೂ ಇಲ್ಲೆ ನಡೆಯುತ್ತದೆ. ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ಮೈದಾನದಲ್ಲಿ ಖಾಸಗಿ ವಾಹನಗಳ ಸಂಚಾರ ಮನಬಂದಂತೆ ನಡೆಯುತ್ತಿದ್ದು, ಮೈದಾನಕ್ಕೆ ಕಾಂಪೌಂಡ್ ನಿರ್ಮಿಸುವಂತೆ  ಮನವಿ ಮಾಡಿದರು. ದೈಹಿಕ ಶಿಕ್ಷಕ ಅಧೀಕ್ಷಕ ರಂಗಸ್ವಾಮಿ ಮಾತನಾಡಿರು.
ಬಿಇಓ ಸುಂದರೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಹೊಯ್ಸಳ ಶಾಲಾ ವಿದ್ಯಾರ್ಥಿನಿಯರ ಸ್ವಾಗತ ನೃತ್ಯ ಆಕರ್ಷಕವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.