ಪದಾಧಿಕಾರಿಗಳು ನೌಕರರ ಹಿತ ಕಾಯಿರಿ: ಶಾಸಕ
ಕ.ಪ್ರ. ವಾರ್ತ್ಣೆ ಆಲೂರು ಆ. 25
ಸರ್ಕಾರಿ ಸಂಘದ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿ ನೌಕರರ ಹಿತ ಕಾಯುವಂತೆ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಅವರು ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ 6 ಲಕ್ಷದ 25 ಸಾವಿರ ಶಿಕ್ಷಕರ ಹುದ್ದೆಗಳಲ್ಲಿ 4 ಲಕ್ಷ ನೇಮಕಾತಿಯಾಗಿದ್ದು, 2 ಲಕ್ಷ ಹುದ್ದೆಗಳು ಖಾಲಿ ಇವೆ, ಶಿಕ್ಷಣ ಇಲಾಖೆಯಲ್ಲದೆ ಎಲ್ಲಾ ಇಲಾಖೆಗಳಲ್ಲೂ ಹುದ್ದೆಗಳು ಖಾಲಿ ಇದೆಯೆಂದರು.
ಮೊದಲಿಗೆ ಹೋಲಿಸಿದರೆ ಈಗ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗಿದ್ದು ಪ್ರಸ್ತುತ ಖಾಲಿ ಇರುವ ಹುದ್ದೆಗಳ ಲಾಭ ಪಡೆಯಬೇಕೆಂದ ಅವರು ಜನಸೇವೆಗೆ ಸಂಘದ ಅವಶ್ಯಕತೆಯಿದ್ದು, ಎಲ್ಲಾ ಇಲಾಖೆಯ ನೌಕರರ ಶ್ರೇಯೋಭಿವೃಧ್ದಿಗೆ ಶ್ರಮಿಸಬೇಕೆಂದು ತಾಲೂಕು ನೌಕರರ ಸಂಘದ ನೂತನ ಅಧ್ಯಕ್ಷರಿಗೆ ಕಿವಿಮಾತು ಹೇಳಿದರು.
ನೂತನ ಅಧ್ಯಕ್ಷ ವರದರಾಜು ಮಾತನಾಡಿ, ಸರ್ಕಾರಿ ನೌಕರರಿಗೆ ಬಹಳಷ್ಟು ಸಮಸ್ಯೆಗಳಿವೆ, ಇತ್ತೀಚೆಗೆ ಕೆಲಸ ಮಾಡುವುದೇ ದುಸ್ತರವಾಗುತ್ತಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಬಿ.ಪಿ.ಮಂಜುನಾಥ್ ಮಾತನಾಡಿ, ಸಮಾಜದ ಪರಿವರ್ತನೆ ಶಿಕ್ಷಕನಿಂದ ಶುರುವಾಗುತ್ತದೆ. ಪ್ರತಿ ಹಳ್ಳಿಗಳಲ್ಲಿ ಶಾಲೆಗಳನ್ನು ತೆರೆದಿದ್ದು ಶಿಕ್ಷಕ ವೃಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದರೆ ದೇಶಕ್ಕೆ ಒಳ್ಳೆಯ ಕೊಡುಗೆ ನೀಡಬಹುದು ಎಂದರು.
ಶಾಸಕರು ಸೇರಿದಂತೆ ನೌಕರರ ಸಂಘದ ಹಲವು ಪದಾಧಿಕಾರಿಗಳಿಗೆ ಸನ್ಮಾನ ಮಾಡಲಾಯಿತು.
ಉಪ ತಹಸೀಲ್ದಾರ್ ಸುಬ್ಬಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಲಾಂ ಸತ್ತಾರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

