'ಸೋಲು ಗೆಲವು ಸಮಾನ ಸ್ವೀಕರಿಸಿ'
ಹಾಸನ: ಕ್ರೀಡಾಪಟುಗಳು ಸೋಲನ್ನು ಗೆಲುವಿನ ರೀತಿಯಲ್ಲಿ ಕಾಣುವ ಮೂಲಕ ಮುಂದೆ ಯಶಸ್ಸು ಗಳಿಸುವಂತೆ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಕಿವಿಮಾತು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲೆ ವಿಭಾಗ, ಕಬ್ಬತ್ತಿ ಕ್ರಾಸ್ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ದಕ್ಷಿಣ ವಲಯ ಪ್ರೌಢಶಾಲೆಗಳ ಎರಡು ದಿವಸಗಳ ಕ್ರೀಡಾಕೂಟ-2013ನ್ನು ಪಾರಿವಾಳ ಹಾರಿ ಬಿಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾಪಟುಗಳು ಆಟಕ್ಕೆ ಮೊದಲ ಆದ್ಯತೆ ನೀಡಬೇಕು. ಸೋಲು ಮತ್ತು ಗೆಲುವನ್ನು ಸಮಾನ ರೀತಿಯಲ್ಲಿ ಸ್ವೀಕರಿಸಿದರೆ ಮುಂದಿನ ಕ್ರೀಡೆಯಲ್ಲಿ ಗೆಲ್ಲಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಜಿಲ್ಲೆಯ ಕ್ರೀಡಾಪಟು ಗಿರೀಶ್ ಪ್ಯಾರಾ ಒಲಂಪಿಕ್ನಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಬೆಳ್ಳಿ ಪದಕ ಪಡೆದು ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿರುವಂತೆ ಯುವ ಕ್ರೀಡಾಪಟುಗಳು ಕೂಡ ಹೆಸರು ತರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಮೊದಲು ಧ್ವಜಾರೋಹಣ ಹಾಗೂ ಕ್ರೀಡಾಪಟುಗಳಿಂದ ವಂದನೆ ಸ್ವೀಕರಿಸಿದರು.
ಸಕಲೇಶಪುರ ಕ್ಷೇತ್ರದ ಶಾಸಕ ಎಚ್.ಕೆ. ಕುಮಾರಸ್ವಾಮಿ, ತಾಪಂ ಅಧ್ಯಕ್ಷೆ ರತ್ನ ಹನುಮೇಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಎಸ್. ದೇವೇಗೌಡ, ಚನ್ನಂಗಿಹಳ್ಳಿ ಗ್ರಾಪಂ ಅಧ್ಯಕ್ಷೆ ಜ್ಯೋತಿ ಯೋಗಣ್ಣ, ಉಪಾಧ್ಯಕ್ಷ ಕೆ.ಎಲ್. ದೇವಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ಜಿ. ಈಶ್ವರಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಗೋವಿಂದೇಗೌಡ, ವಕೀಲರಾದ ಚನ್ನಂಗಿಹಳ್ಳಿ ಶ್ರೀಕಾಂತ್, ಗೋಪಾಲ್, ಯಾರಾನೆ ರಮೇಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

