ಮೈಸೂರು ವಿವಿ ಕ್ರೀಡಾಂಗಣ ಮೇಲ್ದರ್ಜೆಗೆ
ಕ.ಪ್ರ.ವಾರ್ತೆ , ಹೊಳೆನರಸೀಪುರ , ಆ.25
ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಈಗಿರುವ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು 55 ಕೋಟಿ ಅನುದಾನಕ್ಕಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ಕೃಷ್ಣ ತಿಳಿಸಿದರು.
ಅವರು ತಾಲೂಕಿನ ಪಡುವಲಹಿಪ್ಪೆಯಲ್ಲಿನ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸೆ.2ರಂದು ಆಯೋಜಿಸಲಾಗಿರುವ ಮೈಸೂರು ವಿ.ವಿ ಅಂತರ ಕಾಲೇಜುಗಳ ಪುರುಷ ಮತ್ತು ಮಹಿಳೆಯರ ಕ್ರಾಸ್ ಕಂಟ್ರಿ ಸ್ಪರ್ಧೆಯ ಕುರಿತಂತೆ ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದಷ್ಟೇ ಪ್ರಾಮುಖ್ಯತೆಯನ್ನು ದೈಹಿಕ ಶಿಕ್ಷಣ ವಿಭಾಗಕ್ಕೂ ನೀಡುವ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯದಲ್ಲಿನ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸುವ ಕುರಿತಂತೆ ಚರ್ಚೆ ನಡೆದಿದೆ ಎಂದು ಹೇಳಿದರು.
ಈ ಕುರಿತಂತೆ ನೂತನ ಕುಲಸಚಿವರಾದ ಪ್ರೊ.ರಂಗಪ್ಪ ಅವರೂ ಈ ಕುರಿತಂತೆ ವಿಶೇಷ ಆಸಕ್ತಿಯನ್ನು ವಹಿಸಿ ಸರ್ಕಾರಕ್ಕೆ ಹೆಚ್ಚಿನ ಅನುದಾನಕ್ಕಾಗಿ ಪತ್ರ ಬರೆಯಲು ಮುಂದಾಗಿರುವುದಾಗಿ ಅವರು ತಿಳಿಸಿದರು.
ಕ್ರಾಸ್ಕಂಟ್ರಿಯಂತಹ ಗ್ರಾಮೀಣ ಕ್ರೀಡೆಯನ್ನು ಗ್ರಾಮೀಣ ಭಾಗದಲ್ಲಿನ ಕಾಲೇಜಿನಲ್ಲಿಯೇ ಆಯೋಜಿಸುವ ಮೂಲಕವಾಗಿ ಯುವ ಹಾಗೂ ಗ್ರಾಮೀಣ ಪ್ರತಿಭೆಗಳನ್ನು ಹೊರತೆಗೆಯುವ ಮತ್ತು ಪ್ರೋತ್ಸಾಹಿಸುವ ಸಲುವಾಗಿ ಈ ಕ್ರೀಡಾಕೂಟವನ್ನು ಸೆ.2ರಂದು ತಮ್ಮ ಕಾಲೇಜಿನಲ್ಲಿ ಹಮ್ಮಿಕೊಂಡಿರುವುದಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಿ.ಡಿ.ನಾರಾಯಣ್ ತಿಳಿಸಿದರು.
ಈ ಸ್ಪರ್ಧೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿನ ಕಾಲೇಜುಗಳ 400 ಕ್ಕೂ ಹೆಚ್ಚಿನ ಕ್ರೀಡಾಳುಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.
ಮೈಸೂರು ವಿವಿಯ ಕ್ರಿಕೆಟ್ ವಿಭಾಗದ ತರಬೇತುದಾರ ಡಾ.ಮನ್ಸೂರು ಅಹಮದ್, ದೈಹಿಕ ಶಿಕ್ಷಣ ನಿರ್ದೇಶಕ ಬಿ.ಡಿ.ಕಾಂತರಾಜು, ಕೃಷ್ಣಯ್ಯ, ಪಡುವಲಹಿಪ್ಪೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಜಿ.ಪಿಯೋಗೇಶ್, ಕಿರಣ್ ರಾವತ್, ಪ್ರಾಧ್ಯಾಪಕ ಪಾರ್ಥೇಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

