ಹಾಸನ

ಜಿಲ್ಲಾ ಚಿತ್ರಕಲಾ ಸ್ಪರ್ಧೆ ಉದ್ಘಾಟನೆ

Published On :

ಕ.ಪ್ರ. ವಾರ್ತೆ ,  ಹಾಸನ ,  ಆ. 26
ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಚಿತ್ರಕಲಾ ಸ್ಪರ್ಧೆ ಉತ್ತಮ ವೇದಿಕೆಯಾಗಿದೆ ಎಂದು ನಗರಸಭೆ ಸದಸ್ಯೆ ನೇತ್ರಾವತಿ ಗಿರೀಶ್ ತಿಳಿಸಿದರು. ನಗರದ ಸಂಸ್ಕೃತ ಭವನದಲ್ಲಿ ಆನಬೆಲ್ ಶಿಕ್ಷಣ ಸಂಸ್ಥೆ ಹಾಗೂ ರೋಟರಿ   ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
 ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ನಡೆಸುವುದರಿಂದ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಬಹುದು ಎಂದು ಹೇಳಿದರು.
  ಎರಡೂ ಸಂಸ್ಥೆಗಳು ಅನೇಕ ಅತ್ಯುತ್ತಮ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವುದನ್ನು ಸ್ವಾಗತಿಸಿ, ಮುಂದೆ ಇಂತಹ ಕಾರ್ಯಕ್ರಮ ಇನ್ನೂ ಹೆಚ್ಚು ಹೆಚ್ಚು ಬರಲಿ ಎಂದು ಶುಭ ಹಾರೈಸಿದರು.
 ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿ ತಮ್ಮದೇ ಆದ ಕಲ್ಪನೆಯ ಚಿತ್ತಾರವನ್ನು ಮೂಡಿಸಿದರು. ವಿಜೇತ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಿದರು. ರೋಟರಿ ಅಧ್ಯಕ್ಷ ಮದನ್‌ಕುಮಾರ್ ಸ್ವಾಗತಿಸಿದರು. ಸಂಸ್ಥೆ ನಿರ್ದೇಶಕ ಫಣಿಕುಮಾರ್ ಕಾರ್ಯಕ್ರಮ ನಡೆಸಿಕೊಟ್ಟರು. ಬೆಂಗಳೂರಿನ ಸಂತೋಷ್, ರೋ. ಬಿ.ಎನ್. ರಮೇಶ್, ಅಮೃತ, ರವಿಕುಮಾರ್, ಶಿವರಾಂ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.