ಹಾಸನ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕ ಬಂಧನ, ಅಮಾನತು

Published On :

ಹಾಸನ: ಶಿಕ್ಷಕನೊಬ್ಬ 7ನೇ ತರಗತಿ ವಿದ್ಯಾರ್ಥಿನಿಗೆ ಹಲವು ದಿನಗಳಿಂದ ನೀಡುತ್ತಿದ್ದ ಲೈಂಗಿಕ ಕಿರುಕುಳ ತಡವಾಗಿ ಬೆಳಕಿಗೆ ಬಂದಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಾಲೂಕಿನ ಕೆಂಚಮಾರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಭಾಸ್ಕರ್ (45) ಕಳೆದೊಂದು ವಾರದಿಂದ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ವಿದ್ಯಾರ್ಥಿನಿಯನ್ನು ಕೊನೆಯ ಬೆಂಚ್‌ನಲ್ಲಿ ಕೂರುವಂತೆ, ಸ್ಟೋರ್ ರೂಮ್ ಬಾಗಿಲು ತೆಗೆಯುವಂತೆ ಒತ್ತಾಯಿಸುತ್ತಿದ್ದು, ಆಕೆಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ವಿದ್ಯಾರ್ಥಿನಿಯನ್ನು ತನ್ನ ಬೈಕ್‌ನಲ್ಲಿ ಕೂರುವಂತೆಯೂ ಪೀಡಿಸುತ್ತಿದ್ದರಿಂದ ಆಕೆ ಶಾಲೆಗೆ ಹೋಗಲು ಹಿಂಜರಿಯುತ್ತಿದ್ದಳು. ಮಗಳ ವರ್ತನೆಯನ್ನು ಪ್ರಶ್ನಿಸಿದ ಪೋಷಕರಿಗೆ ವಿಷಯ ತಿಳಿದಿದೆ. ಪೋಷಕರು ಗ್ರಾಮಸ್ಥರ ಗಮನಕ್ಕೆ ತಂದರು. ನಂತರ ಗ್ರಾಮಸ್ಥರೆಲ್ಲ ಸೋಮವಾರ ಶಾಲೆಗೆ ಭೇಟಿ ನೀಡಿ ಭಾಸ್ಕರ್‌ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟರಲ್ಲಿ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹಾಸನ ಗ್ರಾಮಾಂತರ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದರು. ಹಾಸನ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ.
ಅಮಾನತು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಿಕ್ಷಕ ಭಾಸ್ಕರ್‌ನನ್ನು ಅಮಾನತು ಮಾಡಿದ್ದು, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.