ಹಾಸನ

6 ಹೊಸ ಮಾರ್ಗಗಳಲ್ಲಿ ಬಸ್ ಸೌಲಭ್ಯ: ಡಿಟಿಓ ಬಸವರಾಜು

Published On :

ಕ.ಪ್ರ.ವಾರ್ತೆ ,  ಅರಸೀಕೆರೆ ,  ಆ.26
ತಾಲೂಕಿನ ಗ್ರಾಮೀಣ ಪ್ರದೇಶಗಳ 6 ಹೊಸ ಮಾರ್ಗಗಳಿಗೆ ಶೀಘ್ರದಲ್ಲಿಯೇ ಬಸ್ ಸೌಲಭ್ಯ ಒದಗಿಸಲಾಗುವುದು ಎಂದು ಚಿಕ್ಕಮಗಳೂರು ಡಿ.ಟಿ.ಓ. ಬಸವರಾಜು ಭರವಸೆ ನೀಡಿದ್ದಾರೆ. ಪಟ್ಟಣದ ಸಾರಿಗೆ ಸಂಸ್ಥೆ ಡಿಪೋದಲ್ಲಿ ಆಯೋಜಿಸಲಾಗಿದ್ದ ಎಬಿವಿಪಿ ಮುಖಂಡರು ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಸಭೆಯಲ್ಲಿ ಸಮಾಲೋಚನೆ ನಡೆಸಿದರು.
ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರದ ತೀವ್ರ ಕೊರತೆ ಎದುರಾಗಿರುವ ಸಮಸ್ಯೆಗಳ ಬಗ್ಗೆ ಅವರು ಮಾಹಿತಿ ಪಡೆದರು. ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಹಿನ್ನೆಲೆಯಲ್ಲಿ ತಾಲೂಕಿನ ಸಿದ್ದರಹಟ್ಟಿ, ರಂಗನಾಯಕನಕೊಪ್ಪಲು, ಕಣಕಟ್ಟೆ ಸೇರಿದಂತೆ 6 ಹೊಸ ಮಾರ್ಗಗಳಲ್ಲಿ ಬಸ್ ಸಂಚಾರ ಪ್ರಾರಂಭಿಸಲಾಗುವುದು. ಪ್ರಯಾಣಿಕರು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಇಲಾಖೆ ನೌಕರರಿಂದ ಕಿರುಕುಳ ನೀಡುವ ಬಗ್ಗೆ ದೂರುಗಳು ಬಂದಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು. ವಿದ್ಯಾರ್ಥಿಗಳು ಕೂಡ ಇಲಾಖೆ ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸಮಸ್ಯೆಗಳು ಉದ್ಭವವಾದಾಗ ಒಟ್ಟಾಗಿ ಚರ್ಚಿಸಿ ತೀರ್ಮಾನ ಕೈಗೊಂಡಾಗ ಮಾತ್ರವೇ ಪರಿಹಾರ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ನಿಲ್ದಾಣ ಮೇಲ್ವಿಚಾರಕ ವಿಜಯ್‌ಕುಮಾರ್, ಎಬಿವಿಪಿ ಜಿಲ್ಲಾ ಸಂಚಾಲಕ ಕಣಕಟ್ಟೆ ಮಂಜು, ವಿದ್ಯಾರ್ಥಿ ಮುಖಂಡ ಪೂಲ್‌ಚಂದ್, ರಾಮಕೃಷ್ಣ, ಪ್ರವೀಣ್, ದಿಲೀಪ್, ನಿಂಗರಾಜ್, ಇತರರು ಇದ್ದರು.
ಬಸ್ ಅವ್ಯವಸ್ಥೆ ಖಂಡಿಸಿ ಕೆಲ ದಿನಗಳ ಹಿಂದೆ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದನ್ನು ಸ್ಮರಿಸಬಹುದು. ಅಲ್ಲದೇ ಅಧಿಕಾರಿಗಳು ಕೊಟ್ಟ ಮಾತಿನಂತೆ ಸಭೆ ನಡೆಸಿರುವುದು ಶ್ಲಾಘನೀಯ ಸಂಗತಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.