ಹಾಸನ

ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ತರಕಾರಿ ವರ್ತಕರ ಆಗ್ರಹ

Published On :

ಕ.ಪ್ರ.ವಾರ್ತೆ ಹಾಸನ ಆ. 27
ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಗರದ ಹಳೆ ತರಕಾರಿ ಮಾರುಕಟ್ಟೆ ವರ್ತಕರ ಕ್ಷೇಮಾಭ್ಯುದಯ ಸಂಘದವರು ಮಂಗಳವಾರ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್‌ಗೆ ಮನವಿ ನೀಡಿದರು.
ನಗರದ ಹೃದಯ ಭಾಗದಲ್ಲಿ ಸುಮಾರು 75 ವರ್ಷಗಳಿಂದ ಹಳೇ ತರಕಾರಿ ಮಾರುಕಟ್ಟೆ ಅಸ್ತಿತ್ವದಲ್ಲಿದೆ. ಇದು ನಗರಸಭೆ ಜಾಗವಾಗಿದ್ದು, ಅನೇಕ ವರ್ತಕರು ಸುಮಾರು 50 ವರ್ಷಗಳಿಂದ ನಗರಸಭೆಗೆ ನೆಲಬಾಡಿಗೆ ಕಟ್ಟುತ್ತಾ ಬಂದಿದ್ದಾರೆ. ಇಲ್ಲಿದ್ದ ಬಹುತೇಕ ವರ್ತಕರು ಪರಿಶಿಷ್ಟ ಜಾತಿ, ವರ್ಗ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಈ ಜಾಗವನ್ನು ನಗರಸಭೆ ಸಿಬ್ಬಂದಿ, ಆಯುಕ್ತರು, ಉಪ ವಿಭಾಗಾಧಿಕಾರಿ ಸಮ್ಮುಖದಲ್ಲಿ ಏಕಾಏಕಿ 2010ರಲ್ಲಿ ಈ ಮಾರುಕಟ್ಟೆಯನ್ನು ತೆರವುಗೊಳಿಸಿದ್ದರು.
ವರ್ತಕರಿಗೆ ಮುನ್ಸೂಚನೆ ನೀಡದೆ ಮಾರುಕಟ್ಟೆಯನ್ನು ತೆರವುಗೊಳಿಸಲಾಗಿತ್ತು. ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಈ ಹಿಂದೆ ಮನವಿ ಮಾಡಲಾಗಿತ್ತು.
ಆದರೆ ಯಾವುದೇ ಪ್ರಯೋಜನವಾಗದ ಕಾರಣ ಇದರ ವಿರುದ್ಧ ಹೈಕೋರ್ಟ್ ಮೊರೆ ಹೋಗಲಾಗಿತ್ತು. ನ್ಯಾಯಾಲಯ 2012ರಲ್ಲಿ ಈ ಬಗ್ಗೆ ವಿಚಾರಣೆ ನಡೆಸಿ ಅರ್ಜಿಯನ್ನು ಇತ್ಯರ್ಥಗೊಳಿಸಿ ಕಾನೂನು ರೀತಿಯಲ್ಲಿ ವರ್ತಕರು ವ್ಯಾಪಾರ ಮಾಡಲು ಅವಕಾಶ ಕಲ್ಪಿಸುವಂತೆ ಆದೇಶಿಸಿದ್ದರು. ಆದರೆ ಈವರೆಗೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ವರ್ತಕರು ಆರೋಪಿಸಿದರು.
ಕಳೆದ ಮೂರು ವರ್ಷಗಳಿಂದ ಅಂಗಡಿ ಮುಂಗಟ್ಟುಗಳನ್ನು ಕಳೆದುಕೊಂಡು ಜೀವನ ಅಸ್ತವ್ಯಸ್ಥವಾಗಿದ್ದು,  ಬೀದಿಗೆ ಬಂದಿರುವ ವರ್ತಕರ ಕಷ್ಟವನ್ನು ಯಾರೂ ಕೇಳುವವರಿಲ್ಲದಂತಾಗಿದೆ. 150 ಅಂಗಡಿ ಮುಂಗಟ್ಟುಗಳನ್ನು ಕಳೆದುಕೊಂಡ ಸಂತ್ರಸ್ಥರ ತೊಂದರೆ ಪರಿಗಣಿಸಿ ನ್ಯಾಯ ದೊರಕಿಸಿಕೊಂಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ. ಸುರೇಂದ್ರ ರಾವ್, ಎಚ್.ಟಿ.ಸೋಮಶೇಖರ್, ಗಿರೀಶ್, ಪುಷ್ವಲತಾ, ಎಚ್.ಎಸ್.ಶೈಲೇಶ್, ಪಾಂಡುರಂಗ, ಧರಣಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.