ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಹಾಸನ: ಜಿಎನ್‌ಎಂ ಮತ್ತು ಬಿಎಸ್‌ಸಿ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ ಬೌದ್ದ ಹಾಗೂ ಸಿಖ್ ಯುವಕ, ಯುವತಿಯರಿಗೆ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ - ಜಿಎನ್‌ಎಂ ಅಥವಾ ಬಿಎಸ್‌ಸಿ ನರ್ಸಿಂಗ್, ಆದಾಯದ ಮಿತಿ ವಾರ್ಷಿಕ 2 ಲಕ್ಷ ರು. ಒಳಗಿರಬೇಕು. ಜಾತಿ ಪತ್ರ ಸಲ್ಲಿಸಬೇಕು. ಸರ್ಕಾರಿ ಕೋಟಾದಡಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿ ಆಗಿರಬೇಕು, ಕೋರ್ಸ್ ಅವಧಿ ಜಿಎನ್‌ಎಂ 3 ವರ್ಷ 6 ತಿಂಗಳು ಬಿಎಸ್ಸಿ ನರ್ಸಿಂಗ್ 4 ವರ್ಷ.
ಅರ್ಜಿಗಳನ್ನು ಸೆ. 20ರ ಸಂಜೆ 5.30 ರೊಳಗೆ ಜಿಲ್ಲಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಎಚ್‌ಕ.ಬಿ. ವಾಣಿಜ್ಯ ಸಂಕೀರ್ಣ 2ನೇ ಮಹಡಿ 23ನೇ ಅಡ್ಡ ರಸ್ತೆ ಕುವೆಂಪು ನಗರ, ಹಾಸನ ಈ ಕಚೇರಿಗೆ ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರ ಮೂಲಕ ಸಲ್ಲಿಸುವುದು. ವಿದ್ಯಾರ್ಥಿಗಳು ಅರ್ಜಿ ನಮೂನೆಗಳನ್ನು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿ ಪಡೆಯಬಹುದಾಗಿದೆ.
ಬಸ್ ಸೌಕರ್ಯಕ್ಕೆ ಆಗ್ರಹಿಸಿ ಕುಪ್ಪಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕ.ಪ್ರ.ವಾರ್ತೆ ಹಾಸನ ಆ.28
ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತಮ್ಮ ಗ್ರಾಮಕ್ಕೆ ನಗರ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲೂಕಿನ ಕುಪ್ಪಳ್ಳಿ ಗ್ರಾಮಸ್ಥರು ಬುಧವಾರ ಬೇಲೂರು ರಸ್ತೆಯ ಹೆದ್ದಾರಿಯಲ್ಲಿ ಕೆಲ ಸಮಯ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ತಾಲೂಕಿನ ಕುಪ್ಪಳ್ಳಿ ಗ್ರಾಮಕ್ಕೆ ಬಸ್ ಸಂಪರ್ಕವಿಲ್ಲದೆ ಕುಪ್ಪಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ತೀರ ತೊಂದರೆ ಉಂಟಾಗಿದೆ. ಈ ಬಗ್ಗೆ ಹಲವು ಬಾರಿ ಬಸ್ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದ್ದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಬಸ್ ಇಲ್ಲದೆ ವಿದ್ಯಾರ್ಥಿಗಳು, ಸಾರ್ವಜನಿಕರು ತಮ್ಮ ತಮ್ಮ ಕೆಲಸಗಳಿಗೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರು ಅನಿವಾರ್ಯವಾಗಿ ಆಟೋ ಮತ್ತು ಇತರೆ ವಾಹನ ಅಲವಂಬಿಸಬೇಕಾಗಿದೆ. ಕೂಡಲೇ ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದರು.
ಅಧಿಕಾರಿಗಳ ಭೇಟಿ: ಪ್ರತಿಭಟನಾನಿರತ ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ನಂತರ ಗ್ರಾಮಸ್ಥರ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ವಸಂತ್, ಪ್ರವೀಣಕುಮಾರ್, ಸಿದ್ದರಂಗೇಗೌಡ, ಚಿನ್ನಪ್ಪ, ಮಂಜುನಾಥ್, ಪ್ರದೀಪ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

