ಹಾಸನ

ಸಂಚಾರಕ್ಕೆ ಅಡಚಣೆ, ರಸ್ತೆಬದಿ ಅಂಗಡಿಗಳ ತೆರವು

Published On :

ಕ.ಪ್ರ.ವಾರ್ತೆ ಆಲೂರು ಆ.28
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ  ಬೀದಿ ಬದಿಯ ತರಕಾರಿ ಅಂಗಡಿ, ಪಾನಿಪೂರಿ ಗಾಡಿಗಳು, ತರಕಾರಿ ತಳ್ಳುಗಾಡಿಗಳನ್ನು ಪಟ್ಟಣ ಪಂಚಾಯ್ತಿ  ಮುಖ್ಯಾಧಿಕಾರಿ ವಾಸುದೇವ್ ತೆರವುಗೊಳಿಸಿ, ನಿಗದಿ ಪಡಿಸಿರುವ ಷೆಲ್ಟರ್‌ಗಳಲ್ಲಿ ವ್ಯಾಪಾರ ಮಾಡುವುದಕ್ಕೆ ಸೂಚಿಸಿದರು.
ವ್ಯಾಪಾರಿಗಳ ಪ್ರತಿರೋಧದ ನಡುವೆಯೂ ಪಪಂ ಸಿಬ್ಬಂದಿ ತಳ್ಳು ಗಾಡಿಗಳನ್ನು ತೆರವುಗೊಳಿಸಿದರು. ಈ ಸಮಯದಲ್ಲಿ ತರಕಾರಿ, ಹೂವು ಮಾರುವವರು, ನಾವು ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ನಿಗದಿ ಪಡಿಸಿದ ಜಾಗದಲ್ಲಿ ನಮಗೆ ವ್ಯಾಪಾರ ಆಗುವುದಿಲ್ಲ. ವ್ಯಾಪಾರವನ್ನೇ ನಂಬಿ ಜೀವನ ನಡೆಸುತ್ತಿರುವ ನಮ್ಮನ್ನು ಬೀದಿಪಾಲು ಮಾಡಬೇಡಿ ಎಂದು ಹೆಂಗಸರು ಕಣ್ಣೀರು ಹಾಕಿದರು.
ಇದೇ ಸಂದರ್ಭದಲ್ಲಿ ಮ್ಯಾಕ್ಸಿ ಕ್ಯಾಬ್ ಸಂಘದವರೂ ನಮಗೆ ಮೊದಲು ನಿಲ್ಲಿಸುತ್ತಿದ್ದ ಜಾಗದಲ್ಲಿಯೇ ವಾಹನ ನಿಲ್ಲಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದರಿಂದ ಕೆಲಕಾಲ ಗೊಂದಲದ ಪರಿಸ್ಥಿತಿ ಎದುರಾಯಿತು.
ಸ್ಥಳದಲ್ಲಿದ್ದ ಸರ್ಕಲ್ ಇನ್ಸ್‌ಪೆಕ್ಟರ್ ಜಯಲಕ್ಷ್ಮಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿಯನ್ನು ನಿಭಾಯಿಸಿದರು.
ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್.ಮಂಜೇಗೌಡರು ಮಾತನಾಡಿ ಮ್ಯಾಕ್ಸಿಕ್ಯಾಬ್ ಸೇರಿದಂತೆ ವ್ಯಾಪಾರಿಗಳು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲರೂ ಕುಳಿತು ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡು ಹಿಡಿಯೋಣ ಹಾಗೂ ಹಾಲಿ ಇರುವ ಷೆಲ್ಟರ್ ಪಕ್ಕದಲ್ಲಿ ನೂತನವಾಗಿ ಮತ್ತೊಂದು ಷೆಲ್ಟರ್ ನಿರ್ಮಿಸಿ ಎಲ್ಲಾ ವ್ಯಾಪಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಪಪಂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.