ಸೆ. 1 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಮಿಕ ಸಮ್ಮೇಳನ
ಹಾಸನ: ರಾಜ್ಯ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಸೆ.1ರಂದು ಬೃಹತ್ ರಾಜ್ಯ ಮಟ್ಟದ ಕಾರ್ಮಿಕ ಸಂಘಟನೆ ಬಗೆಗಿನ ಸಮ್ಮೇಳನವನ್ನು ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷ ಸನ್ನಿ ಆಂಡ್ರೊಸ್ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯ ಕಾರ್ಮಿಕ ಸಂಘಟನೆ ಅಧ್ಯಕ್ಷ ಡಾ.ಎಸ್.ಎಸ್.ಪ್ರಕಾಶಂ ಹಾಗೂ ಕೇಂದ್ರ ಮತ್ತು ರಾಜ್ಯದ ಬಹುತೇಕ ಮಂತ್ರಿಗಳು, ಶಾಸಕರು, ಸಂಸದರು, ಕೆಪಿಸಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷ ಹಾಗೂ ಸದಸ್ಯರು ಸೇರಿದಂತೆ ಪಕ್ಷ ಎಲ್ಲಾ ಕಾರ್ಯಕರ್ತರು ಭಾಗವಹಿಸಿಲಿದ್ದಾರೆ ಎಂದರು.
30 ಕಾರ್ಮಿಕರಿಗೆ ಸನ್ಮಾನ: ಈ ಮಹಾ ಸಮಾವೇಶದಲ್ಲಿ ಕಾರ್ಮಿಕರ ದಿನಾಚರಣೆ ನೆನಪಾಗಿ ರಾಜ್ಯದ ಒಟ್ಟು 30 ಕಾರ್ಮಿಕರನ್ನು ಸನ್ಮಾನಿಸಿಲಾಗುತ್ತದೆ ಹಾಗೂ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊರಗ ಕುಂಬರಡಿ ಇವರ ಅದ್ವಿತೀಯ ಕಾರ್ಮಿಕ ಸೇವೆಗಾಗಿ ಸನ್ಮಾನಿಸಲಾಗುತ್ತದೆ. ಈ ಸಮಾವೇಶಕ್ಕೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಾಲಿ, ಮಾಜಿ ಶಾಸಕರು, ವಿಧಾನಸಭೆ ಹಾಗೂ ಪರಿಷತ್, ಗ್ರಾಮ ಪಂಚಯಾತ್ತಿ ಸೇರಿದಂತೆ ಎಲ್ಲರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಉಪಾಧ್ಯಕ್ಷ ಬಿ.ಎಚ್.ನಾರಾಯಣಗೌಡ, ನಗರ ಬ್ಲಾಕ್ ಅಧ್ಯಕ್ಷ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

