ತಾಲೂಕು ಮಟ್ಟದ ಕ್ರೀಡಾಕೂಟ
ಹಾಸನ: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಗರದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ನಡೆಸಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲೂಕು ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟವನ್ನು ವೈದ್ಯ ಮುನಿವೆಂಕಟೇಗೌಡ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಕ್ರೀಡೆಯು ಯಾವಾಗಲೂ ಸ್ಪರ್ಧಾತ್ಮಕ ಹಾಗೂ ಆರೋಗ್ಯಕರವಾಗಿರಬೇಕು ಎಂದು ಕಿವಿಮಾತು ಹೇಳಿದರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶಿವಾನಂದ, ಬಿಇಒ ಪುಟ್ಟರಾಜು, ದೈಹಿಕ ಶಿಕ್ಷಣಾಧಿಕಾರಿ ಈಶ್ವರಪ್ಪ, ಪತ್ರಕರ್ತ ಆರ್.ಪಿ.ವೆಂಕಟೇಶ್ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಕುಡಿಯುವ ನೀರಿನ ಸಮಸ್ಯೆ: ಹೊನಗಾನಹಳ್ಳಿ ಗ್ರಾಮಸ್ಥರ ಆಕ್ರೋಶ
ರಾಮನಾಥಪುರ: ಇಲ್ಲಿಗೆ ಸಮೀಪದ ಹಂಡ್ರಂಗಿ ಪಂಚಾಯ್ತಿ ವ್ಯಾಪ್ತಿಗೆ ಬರುವ ಹೊನಗಾನಹಳ್ಳಿ ಗ್ರಾಮಸ್ಥರು ಇಲ್ಲಿನ ಪಂಚಾಯ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಮೋಟಾರ್ ಕೆಟ್ಟು ವಾರವಾಗುತ್ತಿದ್ದು, ಇಲ್ಲಿನ ಗ್ರಾಮಸ್ಥರು ದಿನನಿತ್ಯ ಎರಡು ಕಿ.ಮೀ ನಷ್ಟು ದೂರ ಕ್ರಮಿಸಿ ಕುಡಿಯುವ ನೀರು ಹೊತ್ತು ತರುತ್ತಿದ್ದು ಈ ಬಗ್ಗೆ ಇಲ್ಲಿನ ಪಂಚಾಯ್ತಿಗೆ ಸಾಕಷ್ಟು ಮನವರಿಕೆ ಮಾಡಿದರೂ ಕುಡಿಯುವ ನೀರಿನ ಅವ್ಯವಸ್ಥೆ ಸರಿಪಡಿಸದೆ ಹಾಗೂ ಒಂದು ಹ್ಯಾಂಡ್ ಪಂಪ್ ವ್ಯವಸ್ಥೆ ಕೂಡ ಒದಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೆಪಕ್ಕೆ ಮಾತ್ರ ಅಧಿಕಾರಿ: ಇಲ್ಲಿ ನೆಪಕ್ಕೆ ಮಾತ್ರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇದ್ದು ಬೆದರು ಬೊಂಬೆಯಂತೆ ಬರೀ ವೀಕ್ಷಣೆಗೆ ಹೊರತು, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಗೋಜಿಗೆ ಹೋಗುವುದಿಲ್ಲ. ಕೂಡಲೇ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಇಲ್ಲಿನ ಪಂಚಾಯ್ತಿಗೆ ಶಿಸ್ತು ಕ್ರಮ ಕೈಗೊಂಡು ಸ್ಥಳೀಯ ಗ್ರಾಮಸ್ಥರಿಗಾಗುತ್ತಿರುವ ತೊಂದರೆ ನಿವಾರಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗ್ರಾಮಸ್ಥರು ದಿನನಿತ್ಯ ಎರಡು ಕಿ.ಮೀ ನಷ್ಟು ದೂರ ಕ್ರಮಿಸಿ ಕುಡಿಯುವ ನೀರು ಹೊತ್ತು ತರುತ್ತಿದ್ದು ಈ ಬಗ್ಗೆ ಇಲ್ಲಿನ ಪಂಚಾಯ್ತಿಗೆ ದೂರಿದರೂ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

